Header Ads
Breaking News

ಬಂಟ್ವಾಳದ ನಾಣ್ಯ ಶ್ರೀ ನಾಗರಕ್ತೇಶ್ವರಿ ಕ್ಷೇತ್ರ : ಹೊರೆಕಾಣಿಕೆ ಮೆರವಣಿಗೆ ಕಾರ್ಯಕ್ರಮ

ಬಂಟ್ವಾಳ: ನಾಣ್ಯ ಶ್ರೀ ನಾಗರಕ್ತೇಶ್ವರೀ ಕ್ಷೇತ್ರದ ಶ್ರೀ ಅಷ್ಠ ಪವಿತ್ರ ನಾಗಮಂಡಲ ಪುಣ್ಯೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ ಸಾನಿಧ್ಯವೃದ್ದಿ ಬ್ರಹ್ಮಕಲಶಾಭಿಷೇಕ ಮಹೋತ್ಸವ ಹಾಗೂ ಶ್ರೀ ಅಷ್ಟಪವಿತ್ರ ನಾಗಮಂಡಲ ಪುಣ್ಯೋತ್ಸವ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ವಿಜ್ರಂಭಣೆಯಿಂದ ನಡೆಯಿತು.

ಅರ್ಕುಳ ಶ್ರೀ ವರದೇಶ್ವರ ದೇವಸ್ಥಾನದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೊಹನದಾಸ ಪರಮಹಂಸ ಸ್ವಾಮೀಜಿ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದ್ದು ರಾಷ್ಟ್ರೀಯ ಹೆದ್ದಾರಿಯ ಮೂಲಕ ಮೆರವಣಿಗೆ ಸಾಗಿ ಬಂತು.

ವರದೇಶ್ವರ ದೇವಸ್ಥಾನದ ಸ್ವತಃ ಪಾದಯಾತ್ರೆ ಯ ಮೂಲಕ ಆಗಮಿಸಿದ ಶ್ರೀಗಳು ಹೊರೆ ಕಾಣಿಕೆಯಲ್ಲಿ ಬಂದ ಅಕ್ಕಿ ಗೋಣಿಯನ್ನು ತಲೆಯಲ್ಲಿ ಹೊತ್ತು ತಂದರು. ಈ ಸಂದರ್ಭ ಶ್ರೀ ಅಷ್ಟ ಪವಿತ್ರ ನಾಗ ಮಂಡಲ ಪುಣ್ಯೋತ್ಸವ ಸಮಿತಿ ಗೌರಾವಾಧ್ಯಕ್ಷ ಐತಪ್ಪ ಆಳ್ವ ಸುಜೀರ್ ಗುತ್ತು, ಅಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ, ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ
ಆಡಳಿತ ಸಮಿತಿ ಅಧ್ಯಕ್ಷ ಪೂವಪ್ಪ ಬಂಗೇರ ನಾಣ್ಯ , ಪ್ರಧಾನ ಸಂಚಾಲಕ ತೇವು ತಾರಾನಾಥ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ಮನೋಜ್ ಆಚಾರ್ಯ ನಾಣ್ಯ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ಪುಂಚಮೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಚೆಂಡೆ ಬಳಗ, ಗೊಂಬೆ ಕುಣಿತ, ಬಣ್ಣದ ಕೊಡೆಗಳು ಮೆರವಣಿಗೆಯ ಆಕರ್ಷಣೆ ಹೆಚ್ಚಿಸಿತು. ಕಲಶ ಹೊತ್ತ ಮಹಿಳೆಯರು ಮೆರವಣಿಗೆಗೆ ವಿಶೇಷ ಮೆರುಗು ನೀಡಿದರು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಬಳಿಕ ಉಗ್ರಾಣ ಮೂಹೂರ್ತ ನೆರವೇರಿಸಿ ಹಸಿರು ಹೊರೆಕಾಣಿಕೆಯನ್ನು ಉಗ್ರಾಣದಲ್ಲಿ ಸಂಗ್ರಹಿಸಲಾಯಿತು.

Related posts

Leave a Reply

Your email address will not be published. Required fields are marked *