Header Ads
Header Ads
Breaking News

ಬಂಟ್ವಾಳ:ಮನೆ ಮನೆಯಿಂದ ಕಸ ಸಂಗ್ರಹ ಕಾರ್ಯ

ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಯಕ್ಕೆ ಪುದು ಗ್ರಾಮ ಪಂಚಾಯತ್ ಕಚೇರಿ ಮುಭಾಗ ಚಾಲನೆ ನೀಡಲಾಯಿತು.ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಾಣಾಧಿಕಾರಿ ರಾಜಣ್ಣ ಅವರು ಕಸ ಸಂಗ್ರಹಿಸುವ ವಾಹನಕ್ಕೆ ತ್ಯಾಜ್ಯ ಸುರಿಯುವ ಮೂಲಕ ಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪಂಚಾಯತ್ ಕೈಗೊಂಡಿರುವ ಈ ಕಾರ್ಯ ಅಭಿನಂದನೀಯವಾದುದು, ಗ್ರಾಮದ ಸ್ವಚ್ಛತೆಯ ದೃಷ್ಟಿಯಿಂದ ಪ್ರತಿಯೋಬ್ಬ ನಾಗರಿಕನೂ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸ ಸಂಗ್ರಹಿಸುವ ವಾಹನಗಳು ಮನೆ ಮನೆಗೆ ಬಂದಾಗ ಅವರಲ್ಲಿ ನೀಡಿ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ ಪುದು ಗ್ರಾಮ ಪಂಚಾಯತ್ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದು ಬೇರೆ ಗ್ರಾಮಗಳ ಜನರು ಬಂದು ಇಲ್ಲಿ ಕಸ ಎಸೆದು ಹೋಗುತ್ತಿದ್ದಾರೆ. ಮನೆಮನೆಗೆ ಕಸ ಸಂಗ್ರಹಣೆಯ ವಾಹನಗಳು ಬಂದಾಗ ಎಲ್ಲಾ ಜನರು ಕಸ ನೀಡಬೇಕು, ಇದರಿಂದಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ ಜೊತೆಗೆ ರಸ್ತೆ ಪಕ್ಕ ಕಸ ಎಸೆಯುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದರು. ಸಾಹಿತಿ ಮಹಮ್ಮದ್ ಮಾರಿಪಳ್ಳ ಸ್ವಚ್ಛತೆ ಗೀತೆ ಹಾಡಿದರು. ಪಂಚಾಯತ್ ಉಪಾಧ್ಯಕ್ಷೆ ಲೀಡಿಯಾ ಪಿಂಟೋ, ಪಿಡಿಓ ಪ್ರೇಮಲತಾ, ಹಾಗೂ ಪಂಚಾಯತ್ ಸದಸ್ಯರು ಹಾಜರಿದ್ದರು. ಬಳಿಕ ನಡೆದ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಸ್ವಚ್ಛತೆಯ ಬಗ್ಗೆ ಕಾರ್ಯನಿರ್ವಾಹಣಾಧಿಕಾರಿ ರಾಜಾಣ್ಣ ಸದಸ್ಯರಿಗೆ ಮಾರ್ಗದರ್ಶನ ಮಾಡಿದರು.

Related posts

Leave a Reply