Header Ads
Header Ads
Breaking News

ಬಂಟ್ವಾಳ ಅಮೆಚೂರ್ ಕಬಡ್ಡಿ ಎಸೋಸಿಯೇಶನ್‌ನಿಂದ ಮ್ಯಾಟ್ ಕಬಡ್ಡಿ ಪಂದ್ಯಾಟ ಚಾಂಪಿಯನ್ ಶಿಪ್ 2018

ಬಂಟ್ವಾಳ: ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮ್ಯಾಟ್ ಕಬಡ್ಡಿ ಪಂದ್ಯಾಟ ಚಾಂಪಿಯನ್ ಶಿಪ್ 2018 ಕ್ರೀಡಾಕೂಟ ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಭಾಗದ ಮೈದಾನದಲ್ಲಿ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ರೀಡೆಗೆ ಪ್ರೋತ್ಸಾಹ ನೀಡುವುದರಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ. ಇತ್ತೀಚಿನ ದಿನಗಳಲ್ಲಿ ನಿಗದಿತ ಸಮಯದೊಳಗೆ ಕಬಡ್ಡಿ ಪಂದ್ಯಾಟ ಆರಂಭಿಸುವ ಪ್ರಕ್ರಿಯೆ ನಡೆದು ಬರುತ್ತಿರುವುದು ಅಭಿನಂದನೀಯ ಎಂದರು.

ಅಂತರಾಷ್ಟ್ರೀಯ ಕಬಡ್ಡಿ ಪಟು ಉದಯ ಚೌಟ ಮಾತನಾಡಿ ಸಮಯದ ಪರಿಮಿತಿಯೊಳಗೆ ಕ್ರೀಡಾಕೂಟವನ್ನು ಆಯೋಜಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷ್ಣಕುಮಾರ್ ಪೂಂಜಾ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಚ್ಚಿದಾನಂದ ಶೆಟ್ಟಿಯವರನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ತಾಲೂಕು ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ರತನ್ ಕುಮಾರ್, ಸಿಸಿಬಿ ಇನ್ಸ್‌ಫೆಕ್ಟರ್ ಶಾಂತರಾಮ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ ಜೈನ್, ಎಸೋಸಿಯೇಷನ್ ಕಾರ್ಯಧ್ಯಕ್ಷ ಪುಷ್ಪರಾಜ ಚೌಟ ಹಾಜರಿದ್ದರು.

Related posts

Leave a Reply