

ಚಾಲನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ವಾಲಿ ನಿಂತ ಘಟನೆ ಬಂಟ್ವಾಳ ಎಸ್ ವಿ.ಎಸ್ ಕಾಲೇಜಿನ ತಿರುವಿನಲ್ಲಿ ನಡೆದಿದ್ದು ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೂರ್ಜೆಯಿಂದ ಬಿ.ಸಿ.ರೋಡಿಗೆ ಬರುತ್ತಿದ್ದ ಜಯರಾಜ್ ಬಸ್ಸು ಎಸ್ ವಿಎಸ್ ಕಾಲೇಜಿನ ಬಳಿಯ ಇಳಿಜಾರು ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿಯಾಗಿದೆ. ಇದರಿಂದಾಗಿ ಬಸ್ಸಿನ ಮುಂಭಾಗ ಮೋರಿಯ ಪಕ್ಕದ ತೋಡಿಗೆ ನುಗ್ಗಿ ನಿಂತಿದೆ. ಘಟನೆಯಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಕ್ಕಿಂತಲೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಅವರೊಂದಿಗೆ ಭೇಟಿ ನೀಡಿದ್ದು ಸಚಿವರು ಹಾಗೂ ಶಾಸಕರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು ತಕ್ಷಣ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.