Header Ads
Header Ads
Breaking News

ಬಂಟ್ವಾಳ ಕ್ಷೇತ್ರದ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಚಾರ

ಪ್ರಚಾರದ ವಾಹನಕ್ಕೆ ಹರೀಶ್ ಕುಮಾರ್ ಚಾಲನೆಕ್ಷೇತ್ರದಲ್ಲಿ ಸಚಿವ ಬಿ.ರಮಾನಾಥ ರೈ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಪ್ರಚಾರಗೊಳಿಸುವ ವಾಹನಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶ ಇದರಲ್ಲಿದೆ ಎಂದು ಈ ಸಂದರ್ಭ ಸುದ್ದಿಗಾರರಿಗೆ ತಿಳಿಸಿದ ಸಚಿವ ಬಿ. ರಮಾನಾಥ ರೈ, ಅಭಿವೃದ್ಧಿಯ ವಿವರಗಳನ್ನು ಮತದಾರರ ಮುಂದಿಡಲಾಗುತ್ತಿದೆ. ಈ ಮೂಲಕ ಜನಾಶೀರ್ವಾದವನ್ನು ಕೋರುತ್ತಿದ್ದೇನೆ ಎಂದರು.

ಈ ಸಂದರ್ಭ ಮಾತನಾಡಿದ ಹರೀಶ್ ಕುಮಾರ್, ರಮಾನಾಥ ರೈ ಅವರು ನಡೆಸಿದ ಜನಪರ ಕಾರ್ಯಗಳನ್ನು ಪ್ರದರ್ಶಿಸಲಾಗುವುದು. ಕಳಂಕರಹಿತ ಪ್ರಾಮಾಣಿಕ ರಾಜಕಾರಣಿ ರಮಾನಾಥ ರೈ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಈ ಸಂದರ್ಭ ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಪಕ್ಷ ಪ್ರಮುಖರಾದ ಕೋಡಿಜಾಲ್ ಇಬ್ರಾಹಿಂ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಪದ್ಮಶೇಖರ ಜೈನ್, ಮಮತಾ ಡಿ.ಎಸ್.ಗಟ್ಟಿ, ಎಂ.ಎಸ್.ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸಂದೀಪ್ ಬಂಟ್ವಾಳ

Related posts

Leave a Reply