Header Ads
Breaking News

ಬಂಟ್ವಾಳ ಕ್ಷೇತ್ರದ ಕೆಲ ರಸ್ತೆಗಳ ಅಭಿವೃದ್ಧಿಯ ಕುರಿತು ಜನರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯ : ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ

ಬಂಟ್ವಾಳ: ಹಿಂದಿನ ಸಾಲಿನಲ್ಲಿ ಅನುಮೋದನೆಗೊಂಡು ತಡೆ ಹಿಡಿಯಲ್ಪಟ್ಟ ಬಂಟ್ವಾಳ ಕ್ಷೇತ್ರದ 6ರಸ್ತೆಗಳ ಅಭಿವೃದ್ಧಿಗೆ ಸಮ್ಮಿಶ್ರ ಸರಕಾರದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ತನ್ನ ಮನವಿ ಮೇರೆಗೆ 8 ಕೋ.ರೂ.ಗಳನ್ನು ಮಂಜೂರು ಮಾಡಿರುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸ್ಪಷ್ಟಪಡಿಸಿದರು.

ಬಂಟ್ವಾಳದ ಪಂಜಿಕಲ್ಲಿನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೆಲವೊಂದು ರಸ್ತೆಗಳ ಅಭಿವೃದ್ಧಿಯ ಕುರಿತು ಜನರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯ ಮಾಡಲಾಗುತ್ತಿದೆ. ಆದರೆ ತಾನು ಯಾವತ್ತೂ ಮಾಡದ ಕಾಮಗಾರಿಗಳನ್ನು ತನ್ನದೆಂದು ಹೇಳಿಲ್ಲ. ಆದರೆ ಈಗ ಸುಳ್ಳು ಹೇಳಲಾಗುತ್ತಿದ್ದು, ಹೀಗಾಗಿ ತಾನು ನಂಬಿರುವ ಪಂಜಿಕಲ್ಲು ಗರಡಿಯಲ್ಲಿ ಪ್ರಾರ್ಥನೆ ಮಾಡಿಯೇ ಈ ವಿಚಾರವನ್ನು ತಿಳಿಸುತ್ತಿದ್ದೇನೆ ಎಂದರು.

ಸುದ್ದಿಗೋಷ್ಟಿಯಲ್ಲಿ ಜಿ.ಪಂ.ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಹಾಗೂ ಮತ್ತಿತರರು ಉಪಸ್ಥಿತಿದ್ದರು.

Related posts

Leave a Reply

Your email address will not be published. Required fields are marked *