Header Ads
Header Ads
Header Ads
Breaking News

ಬಂಟ್ವಾಳ ಕ್ಷೇತ್ರವಿಂದು ಪ್ರಗತಿಯತ್ತ ಮುನ್ನಡೆದಿದೆ ಸುಮಾರು ರೂ.೮ಕೋಟಿ ವೆಚ್ಚದಲ್ಲಿ 274 ಕಾಮಗಾರಿಗಳ ಅನುಷ್ಠಾನ ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ

ವಿಧಾನಸಭೆಯ ಬಂಟ್ವಾಳ ಕ್ಷೇತ್ರವಿಂದು ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆಂದು ಕಳೆದ ನಾಲ್ಕೂವರೆ ವರ್ಷಗಳ ತನ್ನ ಶಾಸಕತ್ವದ ಅವಧಿಯಲ್ಲಿ ವಿವಿಧ ಮೂಲಗಳಿಂದ ಒದಗಿಸಲಾದ 1000 ಕೋಟಿ ರೂಪಾಯಿಗಳ ಯೋಜನೆ ಅನುಷ್ಠಾನಗೊಳ್ಳುತ್ತಿವೆ ಎಂದು ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳ ಪ್ರವಾಸಿ ಬಂಗ್ಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಪಯಣ, ಕ್ಷೇತ್ರದ ಅಭಿವೃದ್ಧಿಗೆ ದೂರದೃಷ್ಟಿಯ ಯೋಜನೆಗಳನ್ನು ಬಿಂಬಿಸುವ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 94 ಸಿ ಮತ್ತು ೯೪ಸಿಸಿ ಮೂಲಕ ಬಂಟ್ವಾಳ ತಾಲೂಕಿನಲ್ಲಿ 20 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದೆ ಎಂದ ರೈ ರಾಜ್ಯದಲ್ಲೇ ಅತಿ ಹೆಚ್ಚು ವಿತರಣೆಯಾದ ತಾಲೂಕು ಬಂಟ್ವಾಳ ಎಂದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು ರೂ.೮ಕೋಟಿ ವೆಚ್ಚದಲ್ಲಿ 274 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭ ತನ್ನ ವಿರೋಧಿಗಳಿಗೆ ತಿರುಗೇಟು ನೀಡಿದ ಸಚಿವ ರೈ, ಚುನಾವಣೆ ಸಂದರ್ಭ ಟೀಕೆ ನಡೆಸುವ ವಿರೋಧಿಗಳಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡದ್ದೇ ನನ್ನ ಉತ್ತರವಾಗಿರುತ್ತದೆ ಎಂದರು.

Related posts

Leave a Reply