Header Ads
Header Ads
Breaking News

ಬಂಟ್ವಾಳ: ಜಕ್ರಿಬೆಟ್ಟು ಗಣೇಶೋತ್ಸವಕ್ಕೆ ವಿಜೃಂಭಣೆಯ ತೆರೆ

ಬಂಟ್ವಾಳ: ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ ಜೈನ್ ಅಧ್ಯಕ್ಷತೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಂದ ಬಂಟ್ವಾಳದ ಜಕ್ರಿಬೆಟ್ಟುವಿನ ದಾಸ ರೈ ಮೈದಾನದಲ್ಲಿ ಐದು ದಿನಗಳ ಕಾಲ ಪೂಜಿಸಲ್ಪಟ್ಟ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ ಮೆರವಣಿಗೆ ಸೋಮವಾರ ರಾತ್ರಿ ವಿಜ್ರಂಭಣೆಯಿಂದ ನಡೆಯಿತು. ವಿವಿಧ ಕಲಾತಂಡಗಳ ಕಲಾ ಪ್ರದರ್ಶನಗಳು ವೇದಿಕೆಯಲ್ಲಿ ನಡೆಯಿತು. ಬಳಿಕ ಶ್ರೀ ಮಹಾಗಣಪತಿಗೆ ಸಂಧ್ಯಾಪೂಜೆ, ವಿಸರ್ಜನಾ ಪೂಜೆ ಹಾಗೂ ಪ್ರಾರ್ಥನೆ ನಡೆದು ಶೋಭಾ ಯಾತ್ರೆ ಮೆರವಣಿಗೆ ಆರಂಭಗೊಂಡಿತು.

ಮಾಜಿ ಸಚಿವ ಬಿ.ರಮಾನಾಥ ರೈ ದಂಪತಿ, ಸಮಿತಿಯ ಅಧ್ಯಕ್ಷ ಪದ್ಮಶೇಖರ್ ಜೈನ್, ಉಪಾಧ್ಯಕ್ಷರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ಎಂ.ರಾಜೀವ ಶೆಟ್ಟಿ ಎಡ್ತೂರು, ಮಾಯಿಲಪ್ಪ ಸಾಲ್ಯಾನ್, ಬೇಬಿ ಕುಂದರ್, ರಾಜಶೇಖರ ಕೋಟ್ಯಾನ್ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀ ಗಣೇಶನ ವಿಸರ್ಜನ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಬಾಲಗಂಗಾಧರ ನಾಥ ತಿಲಕ್ ಅವರು ಸ್ವಾತಂತ್ರ್ಯಕ್ಕಾಗಿ ಜನ ಸಂಘಟಿಸಲು ಸಾರ್ವಜನಿಕ ಗಣೇಶೋತ್ಸವವನ್ನು ಆರಂಭಿಸಿದರು. ಅದೇ ರೀತಿ 14ವರ್ಷಗಳ ಹಿಂದೆ ಬಂಟ್ವಾಳದಲ್ಲಿ ಸಾಮಾಜಿಕ ಸಾಮರಸ್ಯವನ್ನು ಸ್ಥಾಪಿಸಲು ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಆರಂಭಿಸಲಾಯಿತು ಎಂದರು. ಐದು ದಿನಗಳ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಧರ್ಮಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಹಾಗೂ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ನಡೆದವು. ೫ ದಿನಗಳ ಕಾಲ ಭಕ್ತರಿಗೆ ನಿರಂತರ ಅನ್ನದಾನ, ಉಪಾಹರ ಸೇವೆಯೂ ನಡೆಯಿತು.

Related posts

Leave a Reply