Header Ads
Breaking News

ಬಂಟ್ವಾಳ ತಾಲೂಕು ಆಸ್ಪತ್ರೆಗೆ ಸಚಿವ ಡಾ. ಸುಧಾಕರ್ ಭೇಟಿ

ಬಂಟ್ವಾಳ: ರಾಜ್ಯ ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಅವರು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು ಇಲ್ಲಿರುವ ಎಲ್ಲಾ ವ್ಯವಸ್ಥೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಬಂಟ್ವಾಳ ಶಾಸಕ ರಾಜೇಶ್ ನಾಕ್ ಅವರ ಮುತುವರ್ಜಿಯಿಂದ ಆಸ್ಪತ್ರೆಗೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಅವರ ಕಾರ್ಯ ಬದ್ದತೆ ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ಶ್ಲಾಘಿಸಿದರು. ಶೀಘ್ರದಲ್ಲಿ ಆಸ್ಪತ್ರೆಗೆ ಡಿ ಗ್ರೂಪ್ ಹುದ್ದೆಗಳ ಭರ್ತಿ ಸಹಿತ ಅಗತ್ಯ ಸಲಕರಣೆಗಳನ್ನು ಪೂರೈಸಲು ಕ್ರಮಕೈಗೊಳ್ಳಲಾಗುತ್ತದೆ ಎಂದ ಸಚಿವರು, ಆಸ್ಪತ್ರೆಯಲ್ಲಿರುವ ತಜ್ಞ ವೈದ್ಯರು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಶಸ್ತ್ರಚಿಕಿತ್ಸೆಯನ್ನು ಇನ್ನಷ್ಟು ಹೆಚ್ಚಿಸಲು ಇಲ್ಲಿನ ವೈದ್ಯರಿಗೆ ಮೌಖಿಕವಾಗಿ ಸೂಚಿಲಾಗಿದೆ ಎಂದರು.ಪುಂಜಾಲಕಟ್ಟೆ ಪ್ರಾ.ಆರೋಗ್ಯ ಕೇಂದ್ರವನ್ನು ಶಾಸಕ ರಾಜೇಶ್ ನಾಕ್ ಅವರ ಶಿಫಾರಸ್ಸಿನಂತೆ ಮೇಲ್ದರ್ಜೆಗೇರಿಸಿ, ಬ್ರಿಟಿಷ್ ಕಾಲದ ಇಲ್ಲಿರುವ ಕಟ್ಟಡವನ್ನು ತೆರವುಗೊಳಿಸಿ 6 ಕೋ.ರೂ.ವೆಚ್ಚದಲ್ಲಿ ಈ ಆಸ್ಪತ್ರೆಯನ್ನು ಜಾಗತಿಕ ಮಟ್ಟದ ಚಿಕಿತ್ಸಾ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದು ಸಚಿವ ಡಾ.ಸುಧಾಕರ್ ಹೇಳಿದರು. ಈ ಆಸ್ಪತ್ರೆಯಲ್ಲಿ ಹೊರರೋಗಿಗಳ ಸಂಖ್ಯೆಯು ಹೆಚ್ಚಿದ್ದು, ಕೇವಲ ಆಸ್ಪತ್ರೆ ಮಾತ್ರವಲ್ಲ ಇಲ್ಲಿನ ವೈದ್ಯರು, ನರ್ಸ್ ಗಳು ಸಹಿತ ಡಿಗ್ರೂಪ್ ನೌಕರರಿಗೆ ವಸತಿ ಸಮುಚ್ಚಯವನ್ನು ನಿರ್ಮಿಸುವ ಮೂಲಕ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಜತೆಗಿದ್ದು, ಆಸ್ಪತ್ರೆಯ ವ್ಯವಸ್ಥೆಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಜಿ.ಪಂ ಸಿಇಒ ಬಿ.ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ತಾಪಂ.ಇಒ ರಾಜಣ್ಣ, ಜಿಪಂ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ ಮೊದಲಾದವರು ಹಾಜರಿದ್ದರು.

Related posts

Leave a Reply

Your email address will not be published. Required fields are marked *