Header Ads
Header Ads
Breaking News

ಬಂಟ್ವಾಳ: ದಲಿತ ಮುಖಂಡರುಗಳಿoದ ರಾಷ್ಟ್ರೀಕೃತ ಬ್ಯಾಂಕ್‌ಗಳ ವಿರುದ್ದ ಆಕ್ರೋಶ

ಬಂಟ್ವಾಳ: ವಿವಿಧ ಯೋಜನೆಗಳಡಿ ಸಹಾಯಧನ ಪಡೆಯುವ ದಲಿತ ಫಲಾನುಭವಿಗಳಿಗೆ ತಾಲೂಕಿನ ಯಾವುದೇ ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ನೀಡುತ್ತಿಲ್ಲ ಎಂದು ದಲಿತ ಮುಖಂಡರು ಬ್ಯಾಂಕ್‌ಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಹಶೀಲ್ದಾರ್ ಪುರಂದರ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ದಲಿತ ದೌರ್ಜನ್ಯ ಕುಂದು ಕೊರತೆ ನಿವಾರಣ ಸಭೆಯಲ್ಲಿ ಅಳಲು ತೋಡಿಕೊಂಡ ಅವರು ಬ್ಯಾಂಕ್ ಅಧಿಕಾರಿಗಳ ಈ ನಿರ್ಲಕ್ಷ ಧೋರಣೆಯಿಂದಾಗಿ ದಲಿತ ಫಲಾನುಭವಿಗಳಿಗೆ ತೊಂದರೆ ಉಂಟಾಗಿದೆ ಎಂದು ಸಭೆಯ ಗಮನಕ್ಕೆ ತಂದರು. ಈ ಸಂದರ್ಭ ಪಶುಸಂಗೋಪನಾ ಇಲಾಖಾ ಅಧಿಕಾರಿ ಮಾತನಾಡಿ ತಮ್ಮ ಇಲಾಖೆಯ ಇಬ್ಬರು ಫಲಾನುಭವಿಗಳ ಅರ್ಜಿಯನ್ನು ಬಿ.ಸಿ.ರೋಡಿನ ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಕೊರಿಯರ್ ಮೂಲಕ ಕಳುಹಿಸಿ ಕೊಡಲಾಗಿತ್ತಾದರೂ ಸ್ಪಂದಿಸದ ಬ್ಯಾಂಕ್ ಅಧಿಕಾರಿಗಳು ಅರ್ಜಿಯ ವಾಯಿದೆ ಮುಗಿದ ಬಳಿಕ ಮರಳಿ ಅರ್ಜಿಯನ್ನು ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ಸಭಾಧ್ಯಕ್ಷರಿಗೆ ತಿಳಿಸಿದರು. ಬ್ಯಾಂಕ್‌ಗೆ ಒಂದುವಾರಗಳ ಕಾಲ ಗಡುವು ನೀಡಿ ತಹಶೀಲ್ದಾರ್ ಈ ಬಗ್ಗೆ ಕ್ರಮ ಜರುಗಿಸ ಬೇಕು ಎಂದು ದಲಿತ ಮುಖಂಡರೊಬ್ಬರು ಆಗ್ರಹಿಸಿದರು. ಈ ಬಗ್ಗೆ ಸಂಬಂಧಪಟ್ಟ ಎಲ್ಲಾ ಬ್ಯಾಂಕಿನ ಶಾಖಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮುಂದಿನ ಕ್ರಮ ಜರುಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದರು.
ಮನೆ ಮತ್ತಿತರ ಕಟ್ಟಡ ನಿರ್ಮಾಣಕ್ಕೆ ಮರಳು ಅಭಾವ ಉಂಟಾಗಿರುವ ಹಿನ್ನಲೆಯಲ್ಲಿ ಅನೇಕ ದಲಿತ ಕುಟುಂಬಗಳ ಮನೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ತುಂಬಾ ತೊಂದರೆ ಪಡುತ್ತಿದ್ದಾರೆ. ಆದಷ್ಟು ಬೇಗ ಮರಳು ಸಮಸ್ಯೆಯನ್ನು ಬಗೆಹರಿಸಿ ದಲಿತರಿಗೆ ಮನೆ ಕಟ್ಟಲು ಮರಳು ಸಮಸ್ಯೆಯನ್ನು ಬಗೆಹರಿಸ ಬೇಕೆಂದು ದಲಿತ ಮುಖಂಡರು ಆಗ್ರಹಿಸಿದ್ದಾರೆ

Related posts

Leave a Reply