Header Ads
Header Ads
Breaking News

ಬಂಟ್ವಾಳ ಪುರಸಭೆಯಲ್ಲಿ ನಡೆದ ಹಗರಣ ಪ್ರಕರಣ. ಹಗರಣದ ಆರೋಪದ ತನಿಖೆಗೆ ಕಾಂಗ್ರೆಸ್ ಸಿದ್ಧ. ಬಿಜೆಪಿ ಆಡಳಿತದಲ್ಲಾದ ಹಗರಣದ ಬಗ್ಗೆ ತನಿಖೆಯಾಗಬೇಕು. ಬಂಟ್ವಾಳ ಕಾಂಗ್ರೆಸ್ ನಾಯಕರ ಆಗ್ರಹ.

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ಕಳೆದ ಐದು ವರ್ಷದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ತನಿಖೆಗೆ ಕಾಂಗ್ರಸ್ ಸಿದ್ದವಿದೆ, ಆದರೆ ಪುರಸಭೆಯಲ್ಲಿ ಈ ಹಿಂದೆ ಬಿಜೆಪಿ ಆಡಳಿತ ಕಾಲದಲ್ಲಿ ಆಗಿರುವ ಎಲ್ಲಾ ಹಗರಣಗಳು ಕೂಡ ತನಿಖೆಯಾಗಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ನರಿಕೊಂಬು ಗ್ರಾಮದಲ್ಲಿರುವ ಅಡಿಟೋರಿಯಂವೊಂದರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಜಗದೀಶ್ ಕೊಯಿಲ, ಇದೀಗ ಬಿಜೆಪಿ ಅಪಪ್ರಚಾರದ ಮೂಲಕ ಜನರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದರು.

ಇನ್ನು ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಪುರಸಭಾ ವ್ಯಾಪ್ತಿಯಲ್ಲಿ ಉತ್ತಮ ಅಭಿವೃದ್ದಿ ಕೆಲಸಗಳಾಗಿದ್ದು, ಇದನ್ನು ಸಹಿಸದ ಬಿಜೆಪಿ ಅಪಪ್ರಚಾರದಲ್ಲಿ ತೊಡಗಿದೆ ಎಂದು ಹೇಳಿದ ಅವರು, ಕಾಂಗ್ರೆಸ್‌ನಿಂದ ಉಚ್ಚಾಟಿಸಲ್ಪಟ್ಟ ಹರಿಕೃಷ್ಣ ಬಂಟ್ವಾಳ್ ಈಗ ಬಿಜೆಪಿಯಲ್ಲಿ ತನ್ನ ಅಸ್ತಿತ್ವಕ್ಕಾಗಿ ಇಂತಹ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪದ್ಮಶೇಖರ ಜೈನ್,ಮಂಜುಳಾ ಮಾವೆ, ಬ್ಲಾಕ್ ಅಧ್ಯಕ್ಷರುಗಳಾದ ಮಾಯಿಲಪ್ಪ ಸಾಲಿಯಾನ್,ಅಬ್ಬಾಸ್ ಆಲಿ,ಪಕ್ಷದ ಮುಖಂಡರಾದ ರಾಜಶೇಖರ ಕೋಟ್ಯಾನ್,ಬೇಬಿ ಕುಂದರ್,ರಾಜಶೇಖರ ನಾಯಕ್, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ ಮೊದಲಾದವರಿದ್ದರು.

Related posts

Leave a Reply