Header Ads
Header Ads
Breaking News

ಬಂಟ್ವಾಳ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮುಖಂಡರ ನಡುವೆ ಜಟಾಪಟಿ

ಇಂದಿರಾ ಕ್ಯಾಂಟಿನ್ ಉದ್ಘಾಟನೆಗೆ ಮಾಜಿ ಸಚಿವ ರಮಾನಾಥ ರೈಯವರ ಆಗಮನವನ್ನು ವಿರೋಧಿಸಿ ಪೊಲೀಸರಿಗೆ ತಾಕೀತು ಮಾಡಿದ್ದಾರೆ ಎನ್ನುವ ವಿಚಾರ ಇಂದು ಬಂಟ್ವಾಳದಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಯಿತು.

ಪೊಲೀಸರು ನೋಟಿಸ್ ನೀಡಬೇಕೆಂಬ ಬಿಜೆಪಿಯ ನಿಲುವನ್ನು ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭದಲ್ಲಿ ತಗಾದೆಗೆ ತೆಗೆದುಕೊಂಡಿದ್ದು, ಮಾತಿನ ಚಕಮಕಿಗೆ ಕಾರಣವಾಯಿತು. ಉಸ್ತುವಾರಿ ಸಚಿವ ಯುಟಿ ಖಾದರ್, ಶಾಸಕ ರಾಜೇಶ ನಾಯ್ಕ್, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಚಿವ ರಮಾನಾಥ್ ರೈಯವರ ಸಮ್ಮುಖದಲ್ಲೆ ಪರಸ್ಪರ ಮಾತಿಗೆ ಮಾತು ಬೆಳೆದು ವಾಕ್ಸಮರಕ್ಕೆ ಕಾರಣವಾಯಿತು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಯು ಟಿ ಖಾದರ್ ಕಾರ್ಯಕರ್ತರನ್ನು ಸಮಾಧಾನ ಪಡಿಸುವ ಪ್ರಯತ್ನವೂ ನಡೆಯಿತು. ಇಂದಿರಾ ಕ್ಯಾಂಟಿನ್‌ನಲ್ಲಿ ಉಪಹಾರ ಸೇವಿಸುವ ಸಂದರ್ಭದಲ್ಲೇ ಈ ಘಟನೆ ನಡೆದಿದ್ದು. ಇದೀಗ ಈ ವಿಡಿಯೋ ಚಿತ್ರಣ ಸಾಮಾಜಿಕ ಜಾತಾಣದಲ್ಲಿ ಹರಿಯುತ್ತಿದೆ.

Related posts

Leave a Reply