Header Ads
Header Ads
Breaking News

ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವ.

ವಿಟ್ಲದ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಮಹಿಳಾ ಸಮಾವೇಶ ನಡೆಯಿತು.ಈ ಸಂದರ್ಭ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವೀ ಮಾತಾನಂದಮಯೀ ಅವರು ಪರಿಶುದ್ಧ ಮನಸ್ಸು ಇದ್ದಾಗ ಭಗವಂತನ ಅನುಗ್ರಹ ಲಭಿಸುತ್ತದೆ. ಸಂಪತ್ತಿನ ಜತೆಗೆ ಪಾರಮಾರ್ತಿಕ ಚಿಂತನೆ ಇದ್ದಾಗ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ತಾಯಿ ಸಮಾಜದ ಭದ್ರ ಭುನಾದಿಯಾಗಿದ್ದು, ದೇಶದ ಉನ್ನತಿ ಕುಟುಂಬದಿಂದ ಸಾಧ್ಯವಾಗುತ್ತದೆ. ಸಾತ್ವಿಕತೆಯ ಮೂಲಕ ಕುಟುಂಬ ವ್ಯವಸ್ಥೆಯಲ್ಲಿ ಸಂಸ್ಕಾರವನ್ನು ನೀಡುವ ಕಾರ್ಯ ಮಾತೃಶಕ್ತಿಗೆ ಇದೆ. ಮಕ್ಕಳಲ್ಲಿ ಮಮತೆ ಇರಬೇಕು ಹೊರತು ವಾಸ್ತಲ್ಯವಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸವಿತಾ ಅಡ್ವಾಯಿ ಅವರ ಗಾದೆ ಗೊಂಚಲು ಪುಸ್ತಕ ಬಿಡುಗಡೆ ಮಾಡಲಾಯಿತು.ಆಲಂಗಾರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮೊಕ್ತೇಸರರಾದ ಪದ್ಮಿನಿ ರಾಮಭಟ್ ಆಲಂಗಾರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೈಲಜಾ ಕೆ. ಟಿ. ಭಟ್, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ. ಶೆಟ್ಟಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮೀರಾ ಆಳ್ವ, ಕೇಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಯಶಸ್ವಿನಿ ಭಟ್ ನೆಕ್ಕರೆ, ವಿಶ್ವ ಹಿಂದೂ ಪರಿಷತ್ ಮಾತೃಮಂಡಳಿ ಪೈವಳಿಕೆ ವಲಯ ಖಂಡ ಸಮಿತಿ ಅಧ್ಯಕ್ಷೆ ಕಮಲ ಟೀಚರ್, ಸವಿತಾ ಎಸ್. ಭಟ್ ಅಡ್ವಾಯಿ ಉಪಸ್ಥಿತರಿದ್ದರು.

 

Related posts

Leave a Reply