Header Ads
Header Ads
Breaking News

ಬಂಧನದ ಭೀತಿಯಿಂದ ಪಾರಾದ ಇಬ್ಬರು ಪ್ರಭಾವಿ ನಾಯಕರು

ರಾಜ್ಯದ ಇಬ್ಬರು ಪ್ರಭಾವಿ ಮುಖಂಡರು ಇಂದು ಬಂಧನದ ಭೀತಿಯಿಂದ ಪಾರಾಗಿದ್ದಾರೆ. ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ತಡೆಯಾಜ್ಞೆ ದೊರೆತರೆ, ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಒಂದು ವೇಳೆ ನ್ಯಾಯಾಲಯ ತಡೆಯಾಜ್ಞೆ ನೀಡದಿದ್ದರೆ ಈ ಇಬ್ಬರು ನಾಯಕರು ಬಂಧನದ ಭೀತಿಗೆ ಒಳಗಾಗಬೇಕಾಗಿತ್ತು. ಆಪರೇಷನ್ ಕಮಲದ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿ.ಎಸ್.ಯಡಿಯೂರಪ್ಪ , ದೇವದುರ್ಗದಲ್ಲಿ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ಅವರ ಜೊತೆ ನಡೆಸಿದ ಆಡಿಯೋ ಪ್ರಕರಣದ ಎಫ್‌ಐಆರ್‌ಗೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

ಡಿ.ಕೆ.ಶಿವಕುಮಾರ್, ಜಾರಿ ನಿರ್ದೇಶನಾಲಯ  ನೀಡಿರುವ ಸಮನ್ಸ್ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಾ.7ಕ್ಕೆ ಮುಂದೂಡಲಾಗಿದೆ. ಫೆ.2ರಂದು ವಿಚಾರಣೆಗೆ ಹಾಜರಾಗುವಂತೆ ಜ.17ರಂದು ಇಡಿ ಸಮನ್ಸ್ ನೀಡಿತ್ತು.
ಆದರೆ, ಬಜೆಟ್ ಅಧಿವೇಶನ ಇದ್ದ ಕಾರಣ ಡಿಕೆಶಿ ಅವರು ಕಾಲಾವಕಾಶ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಫೆ.22ರಂದು ವಿಚಾರಣೆಗೆ ಹಾಜರಾಗಿ ಎಂದು ಸೂಚಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಖುದ್ದು ಸಚಿವ ಡಿ.ಕೆ. ಶಿವಕುಮಾರ್ ಬರಬೇಕು ಎಂದು ಸಮನ್ಸ್‌ನಲ್ಲಿ ಉಲ್ಲೇಖಿಸಲಾಗಿತ್ತು.

Related posts

Leave a Reply

Your email address will not be published. Required fields are marked *