Header Ads
Header Ads
Breaking News

ಬಡ ಮಕ್ಕಳಿಗಾಗಿ ಸರಕಾರಿ ಶಾಲೆ ಉಳಿಸಿ ಕರೆಂಕಿ ಶ್ರೀ ದುರ್ಗಾಫ್ರೆಂಡ್ಸ್‌ನಿಂದ ಧರಣಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ

ಒಂದೇ ದೇಶ ಒಂದೇ ಶಿಕ್ಷಣ ಧ್ಯೇಯವಾಕ್ಯದಡಿ ಬಡ ಮಕ್ಕಳಿಗಾಗಿ ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸುಧಾರಣ ಆಂದೋಲನ ನಡೆಸುತ್ತಿರುವ ಬಂಟ್ವಾಳ ತಾಲೂಕಿನ ಕರೆಂಕಿ ಶ್ರೀ ದುರ್ಗಾಫ್ರೆಂಡ್ಸ್ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಿದೆ.

ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಕಡಲತಡಿಯಿಂದ ರಾಜ್ಯರಾಜಧಾನಿಗೆ ನೂರಕ್ಕಿಂತಲೂ ಅಧಿಕ ಮಂದಿ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಹಾಗೂ ದುರ್ಗಾಫ್ರೆಂಡ್ಸ್ ಕ್ಲಬ್ ನ ಸದಸ್ಯರು ಬೆಂಗಳೂರು ಚಲೋ ಚಳುವಳಿ ನಡೆಸಿ ತಮ್ಮ ಹೋರಾಟವನ್ನು ರಾಜಧಾನಿಗೂ ವಿಸ್ತರಿಸಿಕೊಂಡಿದ್ದಾರೆ.
ದುರ್ಗಾಫ್ರೆಂಡ್ಸ್ ಕ್ಲಬ್ ನ ಈ ಹೋರಾಟಕ್ಕೆ ಕರ್ನಾಟಕ ರಕ್ಷಣ ವೇದಿಕೆ, ಜಯಕರ್ನಾಟಕ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳು ಬೆಂಬಲ ನೀಡಿದ್ದು ಧರಣಿ ಸತ್ಯಾಗ್ರಹಕ್ಕೆ ಸಾಥ್ ನೀಡಿದೆ.ದೇಶಾದ್ಯಂತ ಸಮಾನ ಶಿಕ್ಷಣ ನೀತಿಯನ್ನು ಜಾರಿ ಮಾಡಬೇಕು, ಆರ್.ಟಿ. ಇ ಕಾಯ್ದೆಯನ್ನು ರದ್ದು ಮಾಡಿ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು, ಪಾಠ ಪೂರಕ ಚಟುವಟಿಕೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ಒದಗಿಸಬೇಕು, ಶಿಕ್ಷಕರು ಸಹಿತ ಎಲ್ಲಾ ಸರಕಾರಿ ನೌಕರರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಲು ಆದೇಶ ನೀಡಬೇಕು ಎನ್ನುವ 9 ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.
ದುರ್ಗಾಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ನವೀನ್ ಸೇಸಗುರಿ, ವಿನೋದ್ ಕರೆಂಕಿ, ರಾಮಚಂದ್ರ ಪೂಜಾರಿ, ಆನಂದ ಪೂಜಾರಿ, ಕರುಣೇಂದ್ರ ಪೂಜಾರಿ, ಭುವನೇಶ್ ಪಚ್ಚಿನಡ್ಕ, ಗಣೇಶ್ ಸುವರ್ಣ, ಲೋಕೇಶ್ ಸುವರ್ಣ, ಯತೀಶ್ ಕರ್ಕೆರಾ, ಹರೀಶ್ ಸಾಲ್ಯಾನ್ , ಪುರುಷೋತ್ತಮ ಅಂಚನ್ ಹಾಜರಿದ್ದರು.
ವರದಿ: ಸಂದೀಪ್ ಬಂಟ್ವಾಳ

Related posts

Leave a Reply