Header Ads
Header Ads
Breaking News

ಬದಿಯಡ್ಕ : ‘ತಕಜಣುತಾ’ಕ್ಕೆ ಕಾರ್ಯಕ್ರಮಕ್ಕೆ ಶೀ ಭಾರತೀ ವಿದ್ಯಾಪೀಠದಲ್ಲಿ ಚಾಲನೆ

ನಮ್ಮ ದೇಶದ ಪ್ರಾಚೀನ ಕಲೆಗಳಲ್ಲಿ ಒಂದಾದ ಭರತನಾಟ್ಯ ನೃತ್ಯ ಹಾಗೂ ಸಂಗೀತವನ್ನೊಳ್ಳಗೊಂಡು ಅದ್ಬುತ ಪ್ರಕಾರವಾಗಿ ಜಗತ್ತನ್ನೇ ಸೆಳೆದಿದೆ. ದೇಹಕ್ಕೆ ವ್ಯಾಯಾಮ ಹಾಗೂ ಮನಸ್ಸಿಗೆ ನೆಮ್ಮದಿಯನ್ನು ನೀಡುವಲ್ಲಿ ಭರತನಾಟ್ಯ ಕಲೆಯು ಪೂರಕವಾಗಿದೆ ಎಂದು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಗಣೇಶ್ ಪೈ ಬದಿಯಡ್ಕ ಅಭಿಪ್ರಾಯಪಟ್ಟರು.

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಹಮ್ಮಿಕೊಂಡ ಶಿಕ್ಷಣಕ್ಕಾಗಿ ನೃತ್ಯ ‘ತಕಜಣುತಾ’ ಸರಣಿಯ ಮೊದಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉದ್ಘಾಟಿಸಿ ಅವರು ಮಾತನಾಡಿದರು.
ರಂಗಚಿನ್ನಾರಿಯ ನಿರ್ದೇಶಕ ಕಾಸರಗೋಡು ಚಿನ್ನಾ ಪ್ರಾಸ್ತಾವಿಕವಾಗಿ ಮಾತನಾಡಿ, ಗಡಿಪ್ರದೇಶವಾದ ಕಾಸರಗೋಡಿನಲ್ಲಿ ಹಲವಾರು ಅಭಿಯಾನಗಳನ್ನು ರಂಗಚಿನ್ನಾರಿ ಯಶಸ್ವಿಯಾಗಿ ಕೈಗೊಂಡಿದೆ ಎಂದರು.

ಶಾಲಾ ವ್ಯವಸ್ಥಾಪಕ ಜಯಪ್ರಕಾಶ ಪಜಿಲ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು .ರಂಗಚಿನ್ನಾರಿಯ ನಿರ್ದೇಶಕ ಕೋಳಾರು ಸತೀಶ್ಚಂದ್ರ ಭಂಡಾರಿ, ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದೆ ವಿದುಷಿ ಮಂಜುಳಾ ಸುಬ್ರಹ್ಮಣ್ಯ, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ, ಕವಿ ಸಾಹಿತಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *