Header Ads
Breaking News

ಬದ್ರಿಯಾ ಕಾಲೇಜ್‌ನಲ್ಲಿ ರಕ್ತದಾನ ಶಿಬಿರ

ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆ, ಮತ್ತು ವಿಧ್ಯಾರ್ಥಿ ಸಂಘ ಬದ್ರಿಯಾ ಪ್ರಥಮ ದರ್ಜೆ ಕಾಲೇಜು ಮಂಗಳೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಜಂಟಿ ಆಶ್ರಯದಲ್ಲಿ ತೇಜಸ್ವಿನಿ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಬದ್ರಿಯಾ ಕಾಲೇಜು ಮಂಗಳೂರು ಇದರ ಸಭಾಂಗಣದಲ್ಲಿ ನಡೆಯಿತು.

ವೇದಿಕೆಯಲ್ಲಿ ಬದ್ರಿಯಾ ಪ್ರಥಮ ದರ್ಜೆ ಕಾಲೇಜು ಉಪಪ್ರಾಂಶುಪಾಲರಾದ ಡಾ|ರಮೇಶ್,ತೇಜಸ್ವಿಸಿ ಆಸ್ಪತ್ರೆಯ ಡಾ|ಶಿಲ್ಪ ಪ್ರೇಮ್ ಕುಮಾರ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ನಿರ್ವಾಹಕರಾದ ಇಮ್ರಾನ್ ಬೈತಾರ್ ಉಪಸ್ಥಿತರಿದ್ದರು. ಯಶಸ್ವಿಯಾಗಿ ನಡೆದ ರಕ್ತ ದಾನ ಶಿಬಿರದಲ್ಲಿ ಅಧ್ಯಾಪಕರೂ,ಮಹಿಳೆಯರೂ,ವಿದ್ಯಾರ್ಥಿಗಳೂ ಸೇರಿ ಒಟ್ಟು 49 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ತೇಜಸ್ವಿನಿ ಆಸ್ಪತ್ರೆ ಮಂಗಳೂರು ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

Leave a Reply

Your email address will not be published. Required fields are marked *