Header Ads
Header Ads
Breaking News

ಬಲವಂತದಿಂದ ರೈತರ ಸಾಲ ವಸೂಲಿ ಸಲ್ಲ, ಸರಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು

ಫಸಲು ವಿಫಲವಾದ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳು ರೈತರಿಂದ ಬಲವಂತವಾಗಿ ಸಾಲ ವಸೂಲು ಮಾಡಬಾರದು ಮತ್ತು ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ರೈತರ ಸಂಕಷ್ಟ ನಿವಾರಣೆಗೆ ಪರಿಹಾರ ನೀಡುವುದಕ್ಕಿಂತ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ಮಾಡಲಾಗಿದೆ.
ತಮಿಳುನಾಡು ರೈತರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಈ ರೀತಿ ಸೂಚಿಸಿದೆ.
ಹಣಕಾಸು ಸಂಸ್ಥೆಗಳು ರೈತರಿಂದ ಬಲವಂತವಾಗಿ ಸಾಲ ವಸೂಲು ಮಾಡಲು ಮುಂದಾದಾಗ ಸರ್ಕಾರದಿಂದ ರೈತರು ಯಾವ ರೀತಿ ಸಹಾಯ ಪಡೆಯಬೇಕು ಎಂಬುದರ ಬಗ್ಗೆ ಮಾರ್ಗದರ್ಶಿ ಸೂತ್ರ ರೂಪಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ. ಎಸ್. ನರಸಿಂಹ ಅವರಿಗೆ ನ್ಯಾಯಪೀಠವು ಸೂಚಿಸಿತು. ರೈತರ ಕೃಷಿ ಉತ್ಪನ್ನಗಳನ್ನು ದಲ್ಲಾಳಿಗಳು ಅತಿ ಕಡಿಮೆ ಬೆಲೆಗೆ ಖರೀದಿಸಿ ವಂಚಿಸುವುದನ್ನು ತಪ್ಪಿಸಲು ಸರ್ಕಾರ ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತು.

Related posts

Leave a Reply