Header Ads
Header Ads
Breaking News

ಬಲಿಷ್ಠ ಭಾರತ ನಿರ್ಮಾಣ ಕಾಂಗ್ರೆಸ್‌ನ ಕನಸಾಗಿದೆ ಕನಸನ್ನು ನನಸಾಗಿಸುವತ್ತ ದಾಪುಗಾಲಿಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಬಂಟ್ವಾಳದ ಸಚಿವ ಯು.ಟಿ. ಖಾದರ್ ಹೇಳಿಕೆ

 

ಬಂಟ್ವಾಳ: ನೆಮ್ಮದಿಯ ಸಮಾಜ, ಅಭಿವೃದಿಯ ಕರ್ನಾಟಕ ಮತ್ತು ಬಲಿಷ್ಠ ಭಾರತ ನಿರ್ಮಾಣ ಕಾಂಗ್ರೆಸ್‌ನ ಕನಸಾಗಿದೆ. ಸಿದ್ದರಾಮಯ್ಯ ಸರಕಾರ ಈ ಕನಸನ್ನು ನನಸಾಗಿಸುವತ್ತ ದಾಪುಗಾಲಿಡುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಹೇಳಿದರು.

ಪುದು ವಲಯ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಫರಂಗಿಪೇಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಮ್ ಕ್ಷೇತ್ರವ್ಯಾಪ್ತಿಯಲ್ಲಿ ಜನರ ಮುಂದೆ ಸ್ವಾಭಿಮಾನದಿಂದ ತಲೆ ಎತ್ತಿಕೊಂಡು ಹೋಗುವ ಅವಕಾಶ ನಿರ್ಮಾಣವಾಗಿದೆ. ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆದಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ಕೇಂದ್ರದಲ್ಲಿ ಬಿಜೆಪಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ಜನಸಾಮಾನ್ಯರಿಗೆ ಪ್ರಯೋಜನವಾಗುವ ಯಾವುದೇ ಯೋಜನೆಗಳು ಜಾರಿಗೆ ಬಂದಿಲ್ಲ ಎಂದು ಟೀಕಿಸಿದ ಸಚಿವ ಯು.ಟಿ.ಖಾದರ್ ಪಕ್ಷ ಸಂಘಟನೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ಬೂತ್‌ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು. ಯುವ ಕಾರ್ಯಕರ್ತರು ಎದ್ದು ನಿಂತರೆ ಈ ರಾಜ್ಯದಲ್ಲಿ ಕಾಂಗ್ರೆಸನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮ್ಮರ್ ಫಾರೂಕ್, ಮಂಗಳೂರು ತಾ.ಪಂ.ಸದಸ್ಯ ಮಹಮ್ಮದ್ ಮೋನು, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಪುದು ಗ್ರಾ.ಪಂ.ಉಪಾಧ್ಯಕ್ಷ ಹಾಶೀರ್ ಪೇರಿಮಾರ್, ಮನಪಾ ಕಾರ್ಪೋರೇಟರ್ ವಿನಯರಾಜ್, ತಾ.ಪಂ.ಮಾಜಿ ಸದಸ್ಯ ಆಸೀಫ್ ಇಕ್ಬಾಲ್, ಪಂಚಾಯಿತಿ ಸದಸ್ಯ ರಮ್ಲಾನ್, ಇಕ್ಬಾಲ್ ಸುಜೀರು ಮತ್ತಿತರರು ಹಾಜರಿದ್ದರು.

ವರದಿ: ಸಂದೀಪ್ ಬಂಟ್ವಾಳ

Related posts

Leave a Reply