Header Ads
Header Ads
Breaking News

ಬಸ್ಸು ಮೇಲೆ ಉರುಳಿದ ಭಾರೀ ಗಾತ್ರದ ಮರದ ಕೊಂಬೆ

ಖಾಸಗಿ ಬಸ್ಸೊಂದರ ಮೇಲೆ ಮರದ ರೆಂಬೆಯೊಂದು ತುಂಡಾಗಿಬಿದ್ದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಮಂಗಳೂರಿನಿಂದ ಕಿನ್ನಿಗೋಳಿಗೆ ತೆರಳುತ್ತಿದ್ದ ಬಸ್‌ನ ಮೇಲೆ ಕೊಂಬೆ ಉರುಳಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಈ ವೇಳೆ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಆಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಮರದ ರೆಂಬೆಯನ್ನು ತೆರವುಗೊಳಿಸಿದ್ದಾರೆ. ಘಟನೆಯಿಂದಾಗಿ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಂ ಉಂಟಾಗಿತ್ತು. ಪೊಲೀಸರು ಬದಲಿ ಮಾರ್ಗದ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

Leave a Reply