Header Ads
Header Ads
Header Ads
Breaking News

ಬಸ್‌ಗಳ ಮೀಸಲಾತಿ ಸೀಟುಗಳ ದುರುಪಯೋಗ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್‌ರಿಂದ ಸೂಕ್ತ ಕ್ರಮದ ಭರವಸೆ

ಬಸ್‌ಗಳಲ್ಲಿರುವ ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಮೀಸಲಾಗಿರುವ ಸೀಟುಗಳನ್ನು ಅನ್ಯರು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಹೇಳಿದ್ದಾರೆ.

ಮಂಗಳೂರು ಪೊಲೀಸ್ ಕಮೀಷನರ್ ಅವರು ತಮ್ಮ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಬ್ಬರ ದೂರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ದೂರವಾಣಿ ಕರೆ ಮಾಡಿದ ಬೈಕಂಪಾಡಿ ನಿವಾಸಿ, ಮಾತನಾಡಿ, ಬಸ್‌ಗಳಲ್ಲಿ ಸಿಬ್ಬಂದಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅವರ ದರ್ಪದಿಂದಾಗಿ ಪ್ರಯಾಣಿಕರಿಗೆ ಅವರ ಹಕ್ಕುಗಳ ಬಗ್ಗೆ ಮಾತನಾಡಲೂ ಕೂಡ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮಹಿಳೆಯರು ಮತ್ತು ಹಿರಿಯನಾಗರಿಕರ ಸೀಟುಗಳು ಸರಿಯಾಗಿ ಉಪಯೋಗವಾಗುತ್ತಿಲ್ಲ. ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಅನ್ಯರನ್ನು ಎಬ್ಬಿಸಿ ಕುಳಿತುಕೊಳ್ಳಲು ಕೂಡ ಕಷ್ಟವಾಗುತ್ತಿದೆ. ಈ ಬಗ್ಗೆ ಪೊಲೀಸರು ಕಟ್ಟು ನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಕರೆ ಮಾಡಿದ ಬೊಂದೇಲ್ ನಿವಾಸಿಯೋರ್ವರು, ನಂತೂರು ಜಂಕ್ಷನ್‌ನಲ್ಲಿ ಆಗಾಗ್ಗೇ ಸಂಭವಿಸುವ ಅವಘಾತಗಳ ಬಗ್ಗೆ ಪ್ರಸ್ತಾಪಿಸಿ, ಅಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಮೀಷನರ್ , ಈ ಸಂಬಂಧ ಕ್ರಮಕೈಗೊಳ್ಳವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಡಿಸಿಪಿಗಳಾದ ಉಮಾ ಪ್ರಶಾಂತ್, ಹನುಮಂತರಾಯ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥತರಿದ್ದರು.

Related posts

Leave a Reply