Header Ads
Header Ads
Breaking News

ಬಸ್‌ನಲ್ಲಿ ಒತ್ತಾಯದ ಚುಂಬನ, ಮಹಾರಾಷ್ಟ್ರ ಬಿಜೆಪಿ ನಾಯಕನ ಬಂಧನ

ಜೂನ್ ೨೭ರಂದು ಸುವಿಹಾರಿ ಬಸ್ನಲ್ಲಿ ಪ್ರಯಾಣಿಸುವಾಗ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ರವೀಂದ್ರ ಬವಂಥಾಡೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಗಡ್ಚಿರೋಳಿಯಿಂದ ನಾಗಪುರ ನಡುವೆ ಸಂಚರಿಸುವ ಬಸ್ನಲ್ಲಿ ಈ ಘಟನೆ ನಡೆದಿದೆ. ಚುಂಬನದ ದೃಶ್ಯವನ್ನು ವಾಹನದ ಚಾಲಕ ಮತ್ತು ಕ್ಲೀನರ್ ತಮ್ಮ ಮೊಬೈಲ್ ಪೋನಿನಲ್ಲಿ ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಮಹಿಳೆಯು ರವೀಂದ್ರ ಅವರ ವಿರುದ್ಧ ದೂರು ದಾಖಲಿಸಿದ್ದರು.
ಪೊಲೀಸರು ಅತ್ಯಾಚಾರ ಸೇರಿದಂತೆ ಇತರ ಆರೋಪಗಳ ಅಡಿ ದೂರು ದಾಖಲಿಸಿಕೊಂಡು ರವೀಂದ್ರ ಅವರನ್ನು ಬಂಧಿಸಿದ್ದಾರೆ. ವಿಡಿಯೊ ಚಿತ್ರೀಕರಣ ಮಾಡಿಕೊಂಡಿರುವ ಚಾಲಕ ಹಾಗೂ ಕ್ಲೀನರ್ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

Leave a Reply