Header Ads
Header Ads
Breaking News

ಬಸ್-ಆಟೋ ಮುಖಾಮುಖಿ ಡಿಕ್ಕಿ ರಿಕ್ಷಾ ಚಾಲಕನಿಗೆ ಗಂಭೀರ ಗಾಯ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಘಟನೆ

ಸುಳ್ಯ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆಟೋ ರಿಕ್ಷಾವೊಂದು ಕಲ್ಲೋಣಿ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ಸುಳ್ಯ ತಾಲೂಕಿನ ಕಲ್ಲೋನಿಯಲ್ಲಿ ನಡೆದಿದೆ.

ಸುಳ್ಯದಿಂದ ಬೆಳ್ಳಾರೆ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಹಾಗೂ ಬೆಳ್ಳಾರೆಯಿಂದ ಸುಳ್ಯಕ್ಕೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು ಆಟೋ ಚಾಲಕ ದೋಳ್ಪಾಡಿ ಗ್ರಾಮದ ಬಾಲಕೃಷ್ಣ ಗೌಡ ಎಂಬವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯರ ಸಹಕಾರದೊಂದಿಗೆ ಗಾಯಗೊಂಡ ಬಾಲಕೃಷ್ಣರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ತೇಜೇಶ್ವರ್ ಬೆಳ್ಳಾರೆ

Related posts

Leave a Reply