Header Ads
Header Ads
Breaking News

ಬಿಗ್‌ಬಾಸ್ ಕಾರ್ಯಕ್ರಮವನ್ನು ನಿಷೇಧಿಸಿ : ರಾಜ್ಯದಲ್ಲಿ ಮತ್ತೆ ಗೋಹತ್ಯಾ ನಿಷೇಧ ಕಾನೂನು ಜಾರಿಗೆ ತನ್ನಿ

ಅಶ್ಲೀಲತೆಯನ್ನ ತೋರಿಸುತ್ತಿರುವ ಹಿಂದಿಯ ಬಿಗ್‌ಬಾಸ್ ಕಾರ್ಯಕ್ರಮವನ್ನು ನಿಷೇಧಿಸಬೇಕು. ಕರ್ನಾಟಕದಲ್ಲಿ ಮತ್ತೆ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಉಡುಪಿಯಲ್ಲಿ ಹಿಂದೂ ಜನಜಾಗೃತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಉಡುಪಿಯ ಅಜ್ಜರಕಾಡುವಿನ ಯುದ್ದ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ವಿವಿಧ ವಿಚಾರದಲ್ಲಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಲಾಯಿತು. ಪ್ರಮುಖವಾಗಿ ಕರ್ನಾಟಕದಲ್ಲಿ 2014 ರಲ್ಲಿ ಇದ್ದ ಗೋ ಹತ್ಯಾ ನಿಷೇಧವನ್ನು ನಂತರ ಬಂದ ಕಾಂಗ್ರೆಸ್ ಸರಕಾರದ ಅದನ್ನು ವಾಪಾಸ್ ಪಡೆದಿದ್ದು ಇದೀಗ ಮತ್ತೆ ಬಿಜೆಪಿ ಸರಕಾರದ ಅಧಿಕಾರದಲ್ಲಿದೆ. ಆದ್ದರಿಂದ ಇದೀಗ ಮತ್ತೆ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೆ ಮಾಡಬೇಕು ಎಂದು ಆಗ್ರಹಿಸಲಾಯಿತು. ಬಿಗ್‌ಬಾಸ್ 13 ರ ಅವತರಣಿಕೆಯ ಕಾರ್ಯಕ್ರಮ ಅಶ್ಲೀಲತೆ ಮತ್ತು ಲವ್ ಜಿಹಾದ್‌ಗೆ ಪ್ರೋತ್ಸಾಹಿಸುತ್ತಿದೆ. ಆದ್ದರಿಂದ ಈ ಕಾರ್ಯಕ್ರಮದ ನಿರ್ದೇಶಕರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

v4

 

Related posts

Leave a Reply

Your email address will not be published. Required fields are marked *