Header Ads
Breaking News

ಬಿಜೆಪಿಯನ್ನು ಎದುರಿಸಲಾಗದೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಶಕ್ತಿ ಸಂಪೂರ್ಣ ಕುಂದಿದೆ. ರಾಜ್ಯದಲ್ಲಿ ಬಲಿಷ್ಠವಾಗಿರುವ ಬಿಜೆಪಿಯನ್ನು ಎದುರಿಸಲಾಗದೇ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ. ಅವರ ಮೈತ್ರಿ ಹೆಚ್ಚು ಸಮಯ ಉಳಿಯುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಮುಂದಿನ ಚುನಾವಣೆಯಲ್ಲಿ ನಳಿನ್‌ಕುಮಾರ್ ಕಟೀಲ್ ಅವರು ೨ ಲಕ್ಷಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಹೇಳಿದರು.

ಅವರು ಸುಳ್ಯದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ 2014ರಲ್ಲಿ ದೇಶಕ್ಕೆ ಸಮರ್ಥ ಪ್ರಧಾನಿ ಬೇಕೆಂಬ ನಿಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಜನ ಆರಿಸಿದ್ದಾರೆ. ಆಗ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರನ್ನು ಬಹುಮತದಿಂದ ಗೆಲ್ಲಿಸಿಕೊಟ್ಟಿದ್ದಾರೆ. ಈ ಬಾರಿಯೂ ದೇಶಕ್ಕೆ ಮೋದಿಯವರು ಅನಿವಾರ್ಯವಾಗಿದ್ದಾರೆ. ಈ ನಿಟ್ಟಿನಲ್ಲಿ ನಳಿನ್ ಅವರನ್ನು ಕೂಡ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ವಿಜಯಬ್ಯಾಂಕ್ ವಿಲೀನ, ವಿಮಾನ ನಿಲ್ಧಾಣವನ್ನು ಖಾಸಾಗಿಕರಣಗಳು ಎಲ್ಲವೂ ಯುಪಿಎ ಸರಕಾರ ಇರುವಾಗ ನಡೆದ ವಿಚಾರಗಳು ಲೋಕಸಭೆಯಲ್ಲಿ ಮಸೂದೆ ಆಗಿ ಮಂಡನೆಯಾದ ಪರಿಣಾಮ ಇನ್ನು ಈ ವಿಷಯದಲ್ಲಿ ಮಾಡಲು ಅಸಾಧ್ಯವಾಗಿದೆ ಎಂದ ಅವರು ಜಿಲ್ಲೆಯ ಸಮಸ್ಯೆಗಳ ಬಗ್ಗೆ ರಮಾನಾಥ ರೈಗಳು ಹೋರಾಟ ಮಾಡಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಶಾಸಕ ಎಸ್. ಅಂಗಾರ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರಾದ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *