Header Ads
Header Ads
Breaking News

ಬಿಜೆಪಿಯನ್ನು ಸಂಘಟನೆ ಆಧಾರಿತ ಪಕ್ಷವಾಗಿ ಬೆಳೆಸಿದ ಕೀರ್ತಿ ಅವರದ್ದು: ಬಂಗಾರಡ್ಕ ವಿಶ್ವೇಶ್ವರ ಭಟ್ ಹೇಳಿಕೆ

ಕೇಂದ್ರ ಸಚಿವ ಅನಂತ್ ಕುಮಾರ್ ಕರ್ನಾಟಕದಲ್ಲಿ ಸಂಘಟನಾತ್ಮಕವಾಗಿ ಬಿಜೆಪಿಯನ್ನು ಕಟ್ಟಿದವರು. ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟನೆ ಆಧಾರಿತ ಪಕ್ಷವಾಗಿ ಬೆಳೆಸಿದ ಕೀರ್ತಿ ಅವರದ್ದು. ಅದೇ ರೀತಿ ಸಂಘಟನೆಯಲ್ಲಿ ಅವರು ಮಾಡಿದ ಸಾಧನೆ ಊಹೆಗೂ ನಿಲುಕದ್ದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಂಗಾರಡ್ಕ ವಿಶ್ವೇಶ್ವರ ಭಟ್ ಹೇಳಿದರು.

ಅವರು ಸೋಮವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು. ಕೇವಲ ಬಿಜೆಪಿಗರನ್ನಷ್ಟೇ ಅಲ್ಲದೆ ಹೊರಗಿನವರಾದ ಬಂಗಾರಪ್ಪ, ಸಿ.ಎಂ. ಉದಾಸಿ, ಗೋವಿಂದ ಕಾರಜೋಳ ಮೊದಲಾದ ಮೇಲ್ಪಂಕ್ತಿಯ ನಾಯಕರಿಗೆ ಬಿಜೆಪಿಯನ್ನು ಪರಿಚಯಿಸಿದ ಹೆಗ್ಗಳಿಕೆಯೂ ಅನಂತ್ ಕುಮಾರ್ ಅವರಿಗೆ ಸಲ್ಲುತ್ತದೆ. ಬಿ.ಎಸ್ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಜೋಡು ಎತ್ತಿನಂತೆ ರಾಜ್ಯದಲ್ಲಿ ಸಂಚರಿಸಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ವಿರೋಧಿಗಳು ಇಷ್ಟಪಡುವ ಒಬ್ಬ ಸಜ್ಜನ ರಾಜಕಾರಣಿಯಾಗಿ ದೇಶದಲ್ಲಿಯೇ ಗುರುತಿಸಿಕೊಂಡಿದ್ದಾರೆ ಎಂದರು.
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ, ಪುತ್ತೂರು ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಮುಖರಾದ ಅಪ್ಪಯ್ಯ ಮಣಿಯಾಣಿ, ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರಮಂಡಲ ಬಿಜೆಪಿ ಅಧ್ಯಕ್ಷ ಕೆ. ಜೀವಂಧರ್ ಜೈನ್, ರಾಮದಾಸ್ ಹಾರಾಡಿ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪುಯಿಲ ಕೇಶವ ಗೌಡ, ಶಂಭು ಭಟ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಸೇರಿದಂತೆ ಮತ್ತಿತರರು ಸಂತಾಪ ಸೂಚಿಸಿದರು.

Related posts

Leave a Reply