Header Ads
Header Ads
Breaking News

ಬಿಜೆಪಿಯಿಂದ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ನ.11 ರಂದು ನೆಹರೂ ಮೈದಾನಕ್ಕೆ ತಲುಪಲಿರುವ ರ್‍ಯಾಲಿ

ಉಳ್ಳಾಲ: ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ನ. ೧೧ ರ ಸಂಜೆ ಮಂಗಳೂರು ನೆಹರು ಮೈದಾನ ತಲುಪಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದಿಂದ 15,000 ದಿಂದ 20,000 ಜನ ಭಾಗವಹಿಸಲಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದ್ದಾರೆ.

ತೊಕ್ಕೊಟ್ಟು ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಕೊಲ್ಯ ಮತ್ತು ಕುರ್ನಾಡಿನಲ್ಲಿ ನಡೆದ ಯಾತ್ರೆಯ ಪುರ್ವಭಾವಿ ಸಭೆಯಲ್ಲಿ ವ್ಯಾಪಕ ಬೆಂಬಲ ದೊರೆತಿದ್ದು, ಇದಕ್ಕೆ ಅನುಗುಣವಾಗಿ ಅಧಿಕ ಸಂಖ್ಯೆಯಲ್ಲಿ ಜನ ಭಾಗವಹಿಸುವ ವಿಶ್ವಾಸವಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಕಾರ್‍ಯದರ್ಶಿ ನಮಿತಾ ಶ್ಯಾಂ, ರಾಜ್ಯ ಕಾರ್‍ಯಕಾರಿಣಿ ಮಂಡಳಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು, ಡಾ.ಮುನೀರ್ ಬಾವಾ ಉಪಸ್ಥಿತರಿದ್ದರು.