Header Ads
Header Ads
Breaking News

ಬಿಜೆಪಿಯ ಅಪಪ್ರಚಾರದಿಂದ ಸೋಲಾಯಿತು,ಜನಸೇವೆಗೆ ನಾನೆಂದೂ ಸಿದ್ಧ: ರಮಾನಾಥ ರೈ

ಸೋಲಿನಿಂದ ನಾನೆಂದೂ ಧೃತಿಗೆಡುವುದಿಲ್ಲ ಬಂಟ್ವಾಳ: ಬಿಜೆಪಿಯು ತನ್ನ ಪ್ರಾಮಾಣಿಕತೆಯ ಬಗ್ಗೆ ಪ್ರಶ್ನೆ ಮಾಡುತ್ತಿದೆ. ಒಂದು ವೇಳೆ ತನ್ನ ಅಪ್ರಮಾಣಿಕತೆಯ ಬಗ್ಗೆ ಸಾಬೀತು ಮಾಡಿದರೆ, ರಾಜಕೀಯ ನಿವೃತ್ತಿ ಘೋಷಣೆ ಮಾಡುವುದಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆದ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕರ್ತರ ಸಭೆ ಹಾಗೂ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು.

ಕ್ಷೇತ್ರದ ಜನರ ಅಭಿವೃದ್ಧಿಗಾಗಿ ತಾನು ಶಕ್ತಿ ಮೀರಿ ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಗ್ಗೆ ತನಗೆ ತೃಪ್ತಿಯೂ ಇದೆ ಎಂದ ಅವರು, ಬಿಜೆಪಿ ಅವರು ಹಸಿಹಸಿ ಸುಳ್ಳು ಹೇಳಿ ಜನರ ದಾರಿ ತಪ್ಪಿಸಿದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ತನಗೆ ಸೋಲಾಯಿತು. ಅಲ್ಲದೆ, ಬಿಜೆಪಿಯವರು ತನ್ನ ಬಗ್ಗೆ ಹೇಳಿರುವ ವಿಷಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದರಿಂದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರಿಗೆ ಅನ್ಯಾಯವಾದಾಗ ನಾವು ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಿದರು.ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಹತ್ಯೆಯಲ್ಲಿ ಭಾಗವಹಿಸಿಲ್ಲ. ಜಿಲ್ಲೆಯ ಐದು ಹತ್ಯಾ ಆರೋಪಿಗಳು ರಾಜೇಶ್ ನಾಕ್ ಅವರ ಬೆಂಬಲಿಗಾರಗಿದ್ದು, ಅವರ ಪರವಾಗಿ ಚುನಾವಣಾ ಪ್ರಚಾರಕಾರ್ಯದಲ್ಲಿ ತೊಡಗಿಕೊಂಡಿದ್ದರು. ಯಾರು ಹತ್ಯಾ ರಾಜಕೀಯಕ್ಕೆ ಬೆಂಬಲ ನೀಡುತ್ತಾರೋ, ಅವರು ಸರ್ವನಾಶವಾಗಲಿ ಎಂದು ಹೇಳಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಾತ್ಕಾಲಿಕ ಸೋಲಾಗಿದೆ. ಮುಂದೆ ವಿಧಾನ ಪರಿಷತ್ ಹಾಗೂ ಲೋಕ ಸಭಾ ಚುನಾವಣೆ ನಡೆಯಲಿದೆ. ಇದಕ್ಕೆ ಒಗ್ಗಟ್ಟಾಗಿ ಕೆಲಸ ಮಾಡಿ ಮತ್ತೆ ಕರಾವಳಿಯಲ್ಲಿ ಪಕ್ಷ ವನ್ನು ಕಟ್ಟೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಹಿರಿಯ ಮುಖಂಡ ಬಿ.ಎಚ್. ಖಾದರ್ ಹಾಗೂ ಕಾಂಗ್ರೆಸ್ ಮುಂಚೂಣಿ ಘಟಕದ ನಾಯಕರು, ಕಾರ್ಯಕರ್ತರು ಹಾಜರಿದ್ದರು.

Related posts

Leave a Reply