Header Ads
Header Ads
Breaking News

ಬಿಜೆಪಿ ನಾಯಕರ ರೆಸಾರ್ಟ್ ರಾಜಕಾರಣ ವಿಚಾರ : ಕಾಂಗ್ರೆಸ್ ನಾಯಕರ ಆಕ್ರೋಶ

 ಬಿಜೆಪಿ ನಾಯಕರ ರೆಸಾರ್ಟ್ ರಾಜಕೀಯ ಮೂಲಕ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಹರಿಯಾಣ ಗುರುಗ್ರಾಮ ರೆಸಾರ್ಟ್‌ನಲ್ಲಿರುವ ಬಿಜೆಪಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಭಿವೃದ್ದಿ ಮರೆತು ರೆಸಾರ್ಟ್‌ನಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು. ಇದೇ ವೇಳೆ ಮಾಜಿ ಸಚಿವ ರಮಾನಾಥ್ ರೈ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಇದೇ ವೇಳೆ ೫೦ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ರು.

Related posts

Leave a Reply