Header Ads
Breaking News

ಬಿಜೆಪಿ ನೂತನ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ್ ಅವಿರೋಧ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಮೂಡಬಿದಿರೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಸಿರುವ ಸುದರ್ಶನ್ ಇಂದು ಮಂಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಮುಂದಿನ ಮೂರು ವರ್ಷಗಳ ಕಾಲ ಅಧಿಕಾರದ ಹುದ್ದೆಯನ್ನು ನಿಭಾಯಿಸಲಿದ್ದಾರೆ.ರಾಜ್ಯ ಉಪಾಧ್ಯಕ್ಷರು ನಿರ್ಮಲ್ ಕುಮಾರ್ ಸುರಾನ ಮತ್ತು ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಉಸ್ತುವಾರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಜಿಲ್ಲೆಯ ಎಲ್ಲ ಎಂಟು ಮಂಡಲಗಳ ಅಧ್ಯಕ್ಷರು, ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್ ಮತ್ತು ಹಾಲಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು ಭಾಗಿಯಾಗಿದ್ದರು.

Related posts

Leave a Reply

Your email address will not be published. Required fields are marked *