Header Ads
Breaking News

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಜಯ ಪಡೆದಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಈ ಚುನಾವಣೆ ಬಿಜೆಪಿ ಪಾಲಿಗೆ ಯಶಸ್ಸಿನ ಚುನಾವಣೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಜಯ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಚುನಾವಣೆಗೆ ನಿಂತ ಕಾರ್ಯಕರ್ತರಿಗೆ ಬಿಜೆಪಿ ಬೆಂಬಲ ನೀಡಿದೆ. 55% ಕ್ಕಿಂತ ಹೆಚ್ಚು ಕಾರ್ಯಕರ್ತರು ಜಯಗಳಿಸಿದ್ದಾರೆ. 29,478 ಬಿಜೆಪಿ ಬೆಂಬಲಿತರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. 24,000 ಕಾಂಗ್ರೆಸ್ ಬೆಂಬಲಿತರು ಜಯಗಳಿಸಿದ್ದಾರೆ. 18,825 ಜೆಡಿಎಸ್ ಬೆಂಬಲಿತರು ಜಯಗಳಿಸಿದ್ದಾರೆ. 9,753 ಇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಸರ್ವವ್ಯಾಪಿಯಾಗಿ ವಿಸ್ತರಿಸಿದೆ. ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಮನ್ನಣೆ ಸಿಕ್ಕಿದೆ. ಕಾಂಗ್ರೆಸ್‍ನ ಕುತಂತ್ರ ರಾಜಕಾರಣವನ್ನು ತಿರಸ್ಕಾರ ಮಾಡಿದ್ದಾರೆ. ಕಾಂಗ್ರೆಸ್‍ನ ಸಾಂಪ್ರದಾಯಿಕ ಮತಗಳೂ ಕೈ ಬಿಟ್ಟಿದೆ. ಕಾಂಗ್ರೆಸ್ ಠೇವಣಿ ಉಳಿಸಿಕೊಳ್ಳಲೂ ಪರದಾಡಿದೆ. ಎಪಿಎಂಸಿ ಕಾಯ್ದೆ ವಿಚಾರದಲ್ಲಿ ಜನರನ್ನು ಹುಯಿಲೆಬ್ಬಿಸುವ ಯತ್ನ ಆದರೆ ಫಲಿತಾಂಶ ಎಲ್ಲವುದಕ್ಕೂ ಉತ್ತರ ನೀಡಿದೆ.ಮೋದಿಯ ಕೃಷಿ ಕಾಯ್ದೆಗೆ ಜನ ಸಂಪೂರ್ಣ ಬೆಂಬಲ ನೀಡಿದ್ದಾರೆ. ಕೃಷಿ ಪ್ರಧಾನವಾಗಿರುವ ಪ್ರದೇಶಗಳಲ್ಲಿ ಬಿಜೆಪಿ ಜಯಗಳಿಸಿದೆಯುವಕರು ಬಿಜೆಪಿಯತ್ತ ಆಕರ್ಷಿತರಾಗಿದ್ದಾರೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *