Header Ads
Header Ads
Breaking News

ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ವಿಶ್ವ ಶೌಚಾಲಯ ದಿನಾಚರಣೆ

ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ ಮತ್ತು ಗ್ರಾಮ ಪಂಚಾಯತ್‌ಗಳ ಸಹಯೋಗದೊಂದಿಗೆ ವಿಶ್ವ ಶೌಚಾಲಯ ದಿನಾಚರಣೆ ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.

ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೆರಾ ಮಾತನಾಡಿ, ಇಂದಿಗೂ ಅನೇಕ ಮನೆಗಳಲ್ಲಿ ಶೌಚಾಲಯಗಳಿಲ್ಲದೇ ಇರುವುದನ್ನು ಕಾಣಬಹುದಾಗಿದ್ದು ಇಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರಾ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಂತಾಗಟ್ಟಿ, ಮಂಜುಳಾ ಮಾವೆ, ರವೀಂದ್ರ ಕಂಬಳಿ, ಎಂ.ಎಸ್. ಮಹಮ್ಮದ್, ತಹಶೀಲ್ದಾರ್ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply