Header Ads
Header Ads
Breaking News

ಬಿ.ಸಿ ರೋಡ್‌ನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮುಂದೂಡಿಕೆ

ಬಂಟ್ವಾಳ: ಬಂಟ್ವಾಳದಲ್ಲಿ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದ್ದ ಬಿ.ಸಿ.ರೋಡಿನ ಮಿನಿವಿಧಾನದ ಮುಂಭಾಗ ನಿರ್ಮಾಣಗೊಂಡಿದ್ದ ಇಂದಿರಾ ಕ್ಯಾಂಟೀನ್‌ನ ಉದ್ಘಾಟನಾ ಸಮಾರಂಭ ಮುಂದೂಲ್ಪಟ್ಟಿದೆ. ಮಾಜಿ ಸಚಿವ, ಚಿತ್ರನಟ ಅಂಬರೀಶ್ ನಿಧನದ ಪ್ರಯುಕ್ತ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಇಂದಿರಾ ಕ್ಯಾಂಟೀನ್‌ನ ಉದ್ಘಾಟನೆ ಹಾಗೂ 94 ಸಿ ಹಕ್ಕು ಪತ್ರ ವಿತರಣ ಕಾರ್ಯಕ್ರಮವನ್ನು ತಾಲೂಕಾಡಳಿತ ರದ್ದುಗೊಳಿಸಿದೆ.

ಭಾನುವಾರ ಬೆಳಿಗ್ಗೆ 11.30 ಕ್ಕೆ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ ಇಲಾಖೆ ಹಾಗೂ ಪುರಸಭೆಯ ಆಯೋಜನೆಯಲ್ಲಿ ೯೪ಸಿ ಹಕ್ಕುಪತ್ರ ವಿತರಣೆ ಸಮಾರಂಭ ಹಾಗೂ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಿಗದಿಯಾಗಿತ್ತು. ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್. ಶಾಸಕ ರಾಜೇಶ್‌ನಾಯಕ್ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸುವವರಿದ್ದರು. ಈ ಹಿನ್ನಲೆಯಲ್ಲಿ ಇಂದಿರಾಕ್ಯಾಂಟಿನ್ ಅನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಹಾಗೂ ಮಿನಿ ವಿಧಾನ ಸೌಧದ ಮುಂಭಾಗ ಬ್ರಹತ್ ಪೆಂಡಾಲ್ ಹಾಕು ವೇದಿಕೆಯನ್ನು ನಿರ್ಮಿಸಲಾಗಿತ್ತು. ಆದರೆ ಅಂಬರಿಶ್ ನಿಧನ ಹಿನ್ನಲೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ರದ್ದುಗೊಂಡಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ಇಂದಿರಾ ಕ್ಯಾಂಟಿನ್ ಉದ್ಘಾಟನೆಗೆ ಮೂಹೂರ್ತ ನಿಗದಿಯಾಗಿದ್ದರೂ ಕಾರಣಾಂತರಗಳಿಂದ ಮತ್ತೆ ಮುಂದೂಡುವಂತಾಗಿದೆ.

Related posts

Leave a Reply