Header Ads
Header Ads
Breaking News

ಬಿ. ಸಿ. ರೋಡ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, ಗಾಯಗೊಂಡ ಶರತ್ ಮಂಗಳೂರಿನ ಆಸ್ಪತ್ರೆಗೆ ದಾಖಲು

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನಿಗೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಿಸಿ ರೋಡ್‌ನಲ್ಲಿ ನಡೆದಿದೆ.
ಬಿ. ಸಿ. ರೋಡ್ ಉದಯ ಲಾಂಡ್ರಿ ಮಾಲಕ, ಸಜಿಪ ಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬವರ ಪುತ್ರ ಶರತ್ ದಾಳಿಯಿಂದ ಗಂಭೀರ ಗಾಯಗೊಂಡಿರುವ ಯುವಕ ಎಂದು ಗುರುತಿಸಲಾಗಿದೆ. ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದಿರುವ ದುಷ್ಕರ್ಮಿಗಳು ಶರತ್ ಅಂಗಡಿಯಿಂದ ಹೊರಬರುತ್ತಿದ್ದ ವೇಳೆ ದಾಳಿ ನಡೆಸಿ ಪರಾರಿಯಗಿದ್ದು, ತಲೆಗೆ ಗಂಭೀರ ಏಟು ಬಿದ್ದಿದೆ ಎಂದು ತಿಳಿದು ಬಂದಿದೆ.

Related posts

Leave a Reply