Header Ads
Breaking News

ಬಿ.ಸಿ. ರೋಡ್‍ನಲ್ಲಿ ಜಿಲ್ಲಾ ಮಟ್ಟದ ರೈತರ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಬಿ.ಸಿ ರೋಡ್‍ನಲ್ಲಿ ಹೆದ್ದಾರೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಹೋರಾಟ ಇಂದಿಗೆ ನಾಲ್ಕು ತಿಂಗಳು ಪೂರೈಸಿದೆ. ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‍ಗೆ ಕರೆ ನೀಡಿದ್ದು, ಇದರ ಪ್ರಯುಕ್ತ ದಕ್ಷಿಣ ಕನ್ನಡ ರೈತ, ದಲಿತ, ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಬಿ.ಸಿ ರೋಡ್‍ನಲ್ಲಿ ಬೃಹತ್ ಮಟ್ಟದ ಪ್ರತಿಭಟನಾ ಸಭೆ ನಡೆಸಿದರು. ಸಭೆಯನ್ನು ಉದ್ದೇಶಿಸಿ ಮತನಾಡಿದ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಅವರು ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಈ ಸಂದರ್ಭ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಯಾದವ ಶೆಟ್ಟಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ , ಸಿ.ಐ.ಟಿ.ಯು ಜಿಲ್ಲಾ ಅಧ್ಯಕ್ಷ ವಸಂತ ಆಚಾರಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *