Header Ads
Breaking News

ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಿಲ್ಲಿಸದಿದ್ದಲ್ಲಿ ಹೋರಾಟ: ಕಾವು ಹೇಮನಾಥ ಶೆಟ್ಟಿ

ಪುತ್ತೂರು ವ್ಯಾಪ್ತಿಯಲ್ಲಿರುವ ರಸ್ತೆ ಬದಿಯಲ್ಲಿ ಸಣ್ಣ ಪುಟ್ಟ ಅಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ನಿಲ್ಲಿಸದಿದ್ದಲ್ಲಿ ಎಲ್ಲಾ ಸಂತ್ರಸ್ತರನ್ನು ಸೇರಿಸಿಕೊಂಡು ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಅಂತಾ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ ಹೇಳಿದ್ರು. 

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಈಗಾಗಲೇ ಉಪ್ಪಿನಂಗಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಇದೀಗ ಕೆದಂಬಾಡಿ ಮತ್ತು ನರಿಮೊಗರು ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿನ ಅಂಗಡಿಗಳನ್ನು ತೆರವು ಮಾಡುವ ಬಗ್ಗೆ ನೋಟಿಸ್ ನೀಡಲಾಗಿದೆ. ಇಲ್ಲಿನ ಅಂಗಡಿಗಳಿಗೆ ಪಂಚಾಯಿತಿ ಪರವಾನಿಗೆ ನೀಡಿತ್ತು. ಕೆಲವು ಅಂಗಡಿಗಳಿಗೆ ವಿದ್ಯುತ್ ಸಂಪರ್ಕವೂ ಇದೆ. ಅಲ್ಲದೆ ಯಾವುದೇ ರಸ್ತೆ ಅಗಲೀಕರಣ, ಸಾರ್ವಜನಿಕ ಅಭಿವೃದ್ಧಿ ಕೆಲಸಗಳು ಈ ಭಾಗದಲ್ಲಿ ನಡೆಸಲಾಗುತ್ತಿಲ್ಲ. ಯಾರದೇ ವಿರೋಧವಿಲ್ಲದಿದ್ದರೂ ವಿನಾಕಾರಣ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಮೂಲಕ ಬಡವರ ಮೇಲೆ ಸರ್ವಾಧಿಕಾರಿ ಧೋರಣೆ ಮೆರೆಯುತ್ತಿದೆ ಎಂದು ಆರೋಪಿಸಿದರು.ಸುದ್ಧಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಮಿಕ ಮುಖಂಡ ಯು. ಲೋಕೇಶ್ ಹೆಗ್ಡೆ, ಲ್ಯಾನ್ಸಿ ಮಸ್ಕರೇನಸ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *