Header Ads
Header Ads
Breaking News

ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಭಾರತ್ ಬಂದ್. ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ. ಅಲ್ಲಲ್ಲಿ ಟೈರ್‌ಗೆ ಬೆಂಕಿ, ರೋಡಿಗಿಳಿಯದ ಬಸ್‌ಗಳು.

ತೈಲಬೆಲೆ ಮತ್ತು ದಿನಬಳಕೆ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಬಸ್‌ಗಳು ಬಂದ್ ಹಿನ್ನೆಲೆಯಲ್ಲಿ ರಸ್ತೆಗೆ ಇಳಿದಿಲ್ಲ. ಸರ್ಕಾರಿ ಮತ್ತು ಖಾಸಗಿ ಬಸ್‌ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿವೆ.

ಮಂಗಳೂರಿನ ಹಲವೆಡೆ ಟೈರ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಜೊತೆಗೆ ಶಿವಭಾಗ್‌ನ ಹೋಟೆಲ್‌ವೊಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನ ಕಂಕನಾಡಿಯಲ್ಲಿ ಪೊಲೀಸರು ಮತ್ತು ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಲಘುಲಾಠೀಪ್ರಹಾರ ನಡೆಸಿದ್ದಾರೆ. ಈ ವೇಳೆ ಮಾಜಿ ಶಾಸಕ ಜೆ.ಆರ್. ಲೋಬೋ ಸಹಿತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related posts

Leave a Reply