Header Ads
Breaking News

ಬೆಳ್ತಂಗಡಿಯ ಅರಂಬೋಡಿ ಯುವತಿಗೆ ಕೊರೊನಾ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಮುಂಬೈನಿಂದ ಆಗಮಿಸಿದ್ದ 29 ವರ್ಷ ಪ್ರಾಯದ ಬೆಳ್ತಂಗಡಿ ತಾಲೂಕಿನ ಅರಂಬೋಡಿಯ ಯುವತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮೇ 18ರಂದು ಮುಂಬೈನಿಂದ ಬೆಳ್ತಂಗಡಿಗೆ ಆಗಮಿಸಿದ್ದ ಯುವತಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಕೇಂದ್ರದಲ್ಲಿದ್ದವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದೀಗ ಯುವತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ ಯುವತಿಯನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಯುವತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮೇಲೆ ಜಿಲ್ಲಾ ಆರೋಗ್ಯ ಇಲಾಖೆ ನಿಗಾ ಇರಿಸಿದೆ.

Related posts

Leave a Reply

Your email address will not be published. Required fields are marked *