Header Ads
Header Ads
Breaking News

ಬೆಳ್ತಂಗಡಿ ತಾಲೂಕು ಕೆಡಿಪಿ ಸಭೆ, ಶಾಸಕ ವಸಂತ ಬಂಗೇರರಿಂದ ಸಮಸ್ಯೆ ಪರಿಶೀಲನೆ

ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ ರಸ್ತೆಯಲ್ಲಿ ನಿರಂತರ ಟ್ರಾಫಿಕ್ ಜಾಮ್ ಹೆಚ್ಚುತ್ತಿದ್ದು, ಪೋಲಿಸರು ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ನಿಯಮ ಉಲ್ಲಂಘಿಸಿ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ ಎಂದು ಶಾಸಕ ಬಂಗೇರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಕೆಲವು ತಿಂಗಳಿಂದ ಈ ಬಗ್ಗೆ ಹೇಳುತ್ತಿದ್ದರೂ ಪೊಲೀಸರು ಗಮನ ಹರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಪೊಲೀಸ್ ಅಧಿಕಾರಿ ಕಲ್ಲಡ್ಕ ಗಲಾಟೆಯಿಂದ ಸಿಬ್ಬಂದಿ ಕೊರತೆ ಇತ್ತು ಎಂದು ಉತ್ತರಿಸಿದರು. ನಾಳೆಯಿಂದ ರಸ್ತೆ ಮಧ್ಯೆ ನಿಲ್ಲಿಸುವ ವಾಹನ ಚಾಲಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಂತವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ. ಯಾವುದೇ ಕಾರಣಕ್ಕೂ ಟ್ರಾಫಿಕ್ ಜಾಮ್ ಆಗದಂತೆ ನೋಡಿಕೊಳ್ಳಬೇಕು ಎಂದು ಬಂಗೇರ ಅಧಿಕಾರಿಗಳಿಗೆ ಸೂಚಿಸಿದರು.
ಕೊಕ್ಕಡ ಪಶು ವೈದ್ಯಕೀಯ ಆಸ್ಪತ್ರೆ ಯಲ್ಲಿ ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಬಾರದೇ ಕರ್ತವ್ಯ ಲೋಪವೆಸಗಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬದಲಿ ವೈದ್ಯರನ್ನು ನೇಮಿಸಿ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ್ ಅಧ್ಯಕ್ಷರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಶಾಸಕರು ಪಶುಸಂಗೋಪನ ಇಲಾಖೆ ಸಹಾಯಕ ನಿದೇರ್ಶಕರಲ್ಲಿ ಮಾಹಿತಿ ಪಡೆದು ತಕ್ಷಣ ಇವರ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸುವಂತೆ ಸೂಚಿಸಿದರು. ಪಡಿತರ ಅಂಗಡಿಯಲ್ಲಿ ತೂಕ ಮಾಡುವಾಗ ವ್ಯತ್ಯಾಸ ಬರುತ್ತಿದ್ದು, ಪಡಿತರ ಇಳಿಸುವಾಗ ಹಣ ವಸೂಲಿ ಮಾಡು ತ್ತಿರುವ ಬಗ್ಗೆ ಕಳೆದ ಕೆಡಿಪಿ ಸಭೆಯಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿತ್ತು ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಶಾಸಕ ಬಂಗೇರ ಆಹಾರ ಇಲಾಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಉತ್ತ ರಿಸಿದ ತಹಶೀಲ್ದಾರ್ ಈಗಾಗಲೇ ೧೨ ನ್ಯಾಯಬೆಲೆ ಅಂಗಡಿಗಳನ್ನು ಪರಿಶೀಲಿ ಸಿದ್ದು, ಯಾವುದೇ ದೋಷ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಹಣ ಪಡೆಯುವ ವರನ್ನು ಈಗಾಗಲೇ ಬದಲಿಸಲಾಗಿದೆ ಎಂದರು.
ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ಸುವರ್ಣ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ತಹಶೀಲ್ದಾರ್ ತಿಪ್ಪೇಸ್ವಾಮಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುರಾಜ್ ಇದ್ದರು.

Related posts

Leave a Reply