Header Ads
Breaking News

ಬೆಳ್ತಂಗಡಿ ತಾಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮ ಕಪ್ಪುಕಲ್ಲು ಕ್ವಾರಗೆ ದಾಳಿ

ಬೆಳ್ತಂಗಡಿ ತಾಲೂಕಿನ ನವೂರು ಗ್ರಾಮದ ಓಡಿಕಾರು ಎಂಬಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದೆ ಎನ್ನಲಾದ ಕಪ್ಪುಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿಯ ತಾಹಶೀಲ್ದಾರ್ ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳೀಯ ನಿವಾಸಿಯೊಬ್ಬರ ಸ್ಥಳದಲ್ಲಿರುವ ಕೆಲಸ ಮಾಡುತ್ತಿದ್ದ ವ್ಯಕ್ತಿಗಳು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಎರಡು ಹಿಟಾಚಿ, ಒಂದು ಟ್ಯಾಕ್ಟರ್ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಸುಮಾರು 25 ಲಕ್ಷ ರೂಪಾಯಿ ಅಂದಾಜಿಸಲಾಗಿದೆ. ಮುಂದಿನ ಕ್ರಮಕ್ಕಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.

Related posts

Leave a Reply

Your email address will not be published. Required fields are marked *