Header Ads
Header Ads
Breaking News

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುಡ್ಲದ ತುಳುಭವನದ ಸಿರಿಚಾವಡಿಡ್ ತುಳು ಯಕ್ಷ ಸಿರಿ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ತುಳುಭವನದ ಸಿರಿ ಚಾವಡಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂಟ್ವಾಳದ ಕನ್ನಡ ಸಾಹಿತ್ಯ ಪರಿಷತ್‌ನ ಗುರುಕಾರರಾದ ಕೆ. ಮೋಹನ್ ರಾವ್ ಭಾಗವಹಿಸಿದ್ದರು.ಇದೇ ವೇಳೆ ದಿವಂಗತ ಮಿಜಾರು ಅಣ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಇದೇ ವೇಳೆ ಸುಬ್ರಹ್ಮಣ್ಯ ಬೈಪಡಿತ್ತಾಯ ನಂದಳಿಕೆ ಅವರು ದಿವಂಗತ ಮಿಜಾರು ಅಣ್ಣಪ್ಪ ಅವರ ನೆನಪುಗಳನ್ನು ಬಿಚ್ಚಿಟ್ಟರು. ಇದೇ ವೇಳೆ ಯಕ್ಷಗಾನ ಹಾಸ್ಯ ಕಲಾವಿದರಾದ ರತ್ನಾಕರ ಆಚಾರ್ಯ ಪಡುಬಿದ್ರೆ ಅವರನನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಬಿ. ಸದಸ್ಯರಾದ ಬೆನೆಟ್ ಜಿ. ಅಮ್ಮಣ್ಣ, ಎಂ. ದೇವಾನಂದ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply