Header Ads
Header Ads
Header Ads
Breaking News

ಬೈಂದೂರಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ಬಿಜೆಪಿ ಪರಿವರ್ತನಾ ಯಾತ್ರೆಯ ಭಾಗವಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರದ ನಾಗೂರಿನಲ್ಲಿ ಸಾರ್ವಜನಿಕ ಸಭೆ ನಡೆಯಿತು.ಬಿಜೆಪಿ ಪರಿವರ್ತನಾ ಯಾತ್ರೆಯ ಭಾಗವಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರದ ನಾಗೂರಿನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಸ್.ಯಡಿಯೂರಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವ್ರು, ರಾಜ್ಯವನ್ನು ಕಾಂಗ್ರೆಸ್ ಮುಕ್ತವಾಗಿಸಲು ಬೂತ್ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸಿ ಎಂದ ಅವರು ಕಾಂಗ್ರೆಸ್‌ನಲ್ಲಿ ಈಗಾಗಲೇ ಆಂತರಿಕ ಕಚ್ಚಾಟ ಆರಂಭಗೊಂಡಿದೆ ಅವರ ಬಣ್ಣ ಬಯಲಾಗಿದ್ದು ಅಲ್ಲಿ ಭ್ರಷ್ಟರೇ ತುಂಬಿದ್ದಾರೆ.

ರಾಜ್ಯ ಸರ್ಕಾರ ದುರುಪಯೋಗ ಮಾಡುತ್ತಿದೆ  ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿ ಸಾಬೀತಾಗಿರುವ ವೇಣುಗೋಪಾಲ್ ಅವರನ್ನು ಲೋಕಾಸಭಾ ಸದಸ್ಯರಾಗಿ ಮತ್ತು ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಮುಂದುವರಿಸುತ್ತೀರಾ ಎಂಬ ನಮ್ಮ ಪ್ರಶ್ನೆಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉತ್ತರ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ, ಮರ್ಯಾದೆಯಿದ್ದಲ್ಲಿ ವೇಣುಗೋಪಾಲ್ ಅವರನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಲು ಕ್ರಮಕೈಗೊಳ್ಳಲಿ ಎಂದರು.

ಇನ್ನೂ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಮಾನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಧುನಿಕ ಭಸ್ಮಾಸುರ ಅವರೇ ಕಾಂಗ್ರೆಸ್ ಪಕ್ಷವನ್ನು ಸರ್ವ ನಾಶ ಮಾಡುತ್ತಿದ್ದಾರೆ. ದೇಶದಲ್ಲಿ ಹಿಂದೂ, ಮುಸ್ಲಿಂ,ಕ್ರಿಶ್ಚಿಯನ್ನರು ಸಮಾನತೆಯಿಂದ ಬದುಕಬೇಕು. ರೈ ತಾಪಿ ವರ್ಗ ನೆಮ್ಮದಿಯ ಜೀವನ ನಡೆಸಬೇಕು ಎಂಬ ಆಶಯದೊಂದಿಗೆ ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಸಲು 150 ಸ್ಥಾನಗಳ ಗುರಿ ನೀಡಿದ್ದಾರೆ. ಈ ಕೆಲಸವನ್ನು ನಾವು ಪರಿವರ್ತನಾ ಯಾತ್ರೆ ಮೂಲಕ ಮಾಡುತ್ತಿದ್ದೇವೆ. ಬಿಜೆಪಿ ಪರಿವರ್ತನಾ ಯಾತ್ರೆ ಬಗ್ಗೆ ಏನೇನೂ ಮಾತನಾಡಲು ಆರಂಭಿಸಿರುವ ಸಿದ್ದರಾಮಯ್ಯ ಅವರು ನಮ್ಮ ಯಾತ್ರೆಯನ್ನು ಹಿಂಬಾಲಿಸಿ ಸರ್ಕಾರಿ ಪ್ರವಾಸ ಕೈಗೊಳ್ಳಲು ಹೊರಟಿದ್ದಾರೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ಸಂಸದ ಶ್ರೀರಾಮಲು, ಸಂಸದರಾದ ಶೋಭಾ ಕರಂದ್ಲಾಜೆ, ಶ್ರೀರಾಮುಲು, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ ಶೆಟ್ಟಿ ಮತ್ತಿತರು ಉಪಸ್ಥತಿರಿದ್ರು.

ಸುಶಾಂತ್ ಬೈಂದೂರ್ ವಿ4 ನ್ಯೂಸ್

Related posts

Leave a Reply