Header Ads
Header Ads
Breaking News

ಬೈಕಂಪಾಡಿ:ಇಂದಿರಾ ಮಾಧವ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ.

ಬೈಕಂಪಾಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಮಾಧವ ವಿದ್ಯಾರ್ಥಿ ಭವನದ ಉದ್ಘಾಟನಾ ಸಮಾರಂಭವು ನಡೆಯಿತು. ನೂತನ ಭವನವನ್ನು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀ ಪಾದಂಗಳವರು ಉದ್ಘಾಟಿಸಿದರು.ಬೈಕಂಪಾಡಿ ವಿದ್ಯಾರ್ಥಿ ಸಂಘ ಮತ್ತು ಮಹಿಳಾ ಸಮಾಜ ಬೈಕಂಪಾಡಿ ಮತ್ತು ಮುಂಬೈ ಇದರ ವತಿಯಿಂದ ನಿರ್ಮಾಣಗೊಂಡ ಇಂದಿರಾ ಮಾಧವ ವಿದ್ಯಾರ್ಥಿ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಉದ್ಘಾಟಿಸಿದರು. ಬಳಿಕ ಅವರು ಆರ್ಶೀವಚನ ನೀಡಿದರು.ಆನಂತರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ. ವಿರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಕಂಪಾಡಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಓಂದಾಸ್ ಸಾಲ್ಯಾನ್ ವಹಿಸಿದ್ದರುಈ ಸಂದರ್ಭ ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಉದ್ಯಮಿಗಳಾದ ಇಂದಿರಾ ಎಮ್, ಮಾಧವ ಸಾಲಿಯನ್, ದ.ಕ ಮತ್ತು ಉಡುಪಿ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ.ಸಿ. ಕೋಟ್ಯಾನ್, ವಾಸುದೇವ ಸಾಲ್ಯಾನ್, ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ರಾಮಚಂದರ್ ಬೈಕಂಪಾಡಿ, ಬೈಕಂಪಾಡಿ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ರಾಮ.ಎಸ್. ಕರ್ಕೇರ, ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಸುರತ್ಕಲ್‌ನ ನಿರ್ದೇಶಕರಾದ ರಾಜೇಂದ್ರ ಕಲ್ಬಾವಿ ಉಪಸ್ಥಿತರಿದ್ದರು.

 

 

Related posts

Leave a Reply