Header Ads
Header Ads
Breaking News

ಬೈಕ್‌ಗೆ ಸ್ಕೋರ್ಪಿಯೋ ಕಾರು ಢಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ಸಾವು. ಹಳೆಯಂಗಡಿಯ ಪಾವಂಜೆಯಲ್ಲಿ ನಡೆದ ಘಟನೆ.

ಪಾವಂಜೆಯಿಂದ ನಿಟ್ಟೆ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಸ್ಕೋರ್ಪಿಯೋ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ಪಾವಂಜೆಯಲ್ಲಿ ನಡೆದಿದೆ.
ದ್ವಿಚಕ್ರ ವಾಹನ ಸವಾರ ರವೀಂದ್ರ ಪೂಜಾರಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವೀಂದ್ರ ಅವರು ಇಂದು ಬೆಳಿಗ್ಗೆ ಪಾವಂಜೆಯಿಂದ ಸ್ಕೂಟರ್‌ನಲ್ಲಿ ನಿಟ್ಟೆ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭ ಸ್ಕೋರ್ಪಿಯೋ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ರವೀಂದ್ರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಸುರತ್ಕಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

Leave a Reply