

ದ್ವಿಚಕ್ರ ವಾಹನಕ್ಕೆ ಟಿಪ್ಪರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸಣ್ಣ ಪಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಶಿರ್ವ ಕಡೆಯಿಂದ ಕೆಂಪು ಕಲ್ಲು ಹೇರಿ ಕೊಂಡು ಸಾಗುತ್ತಿದ್ದ ಟಿಪ್ಪರ್, ಕಾಪು ವೃತ್ತ ನಿರೀಕ್ಷಕರ ಕಛೇರಿ ಎದುರು ದ್ವಿಚಕ್ರಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಈ ಸಂದರ್ಭ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ಒಳರಸ್ತೆ ಶಿರ್ವ ಕಡೆಯಿಂದ ಬರುವ ಟಿಪ್ಪರ್ ಗಳು ನಿಯಂತ್ರಣವೇ ಇಲ್ಲದಂತೆ ವಾಯುವೇಗದಲ್ಲಿ ಸಂಚರಿಸುವ ಬಗ್ಗೆ ಬಹಳಷ್ಟು ದೂರುಗಳು ಕೇಳಿ ಬರುತ್ತಿದ್ದು, ಸಾಕಷ್ಟು ಅಪಘಾತಗಳೂ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಾಪು ಪೋಲಿಸರು ಭೇಟಿ ನೀಡಿದ್ದಾರೆ.