Header Ads
Header Ads
Breaking News

ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣಾ ಸಂದರ್ಭದಲ್ಲಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಮಂಗಳೂರು ವಿಧಾನಸಭಾ ಕ್ಷೇತ್ರದ ಬೋಳಿಯಾರ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅದ್ಯಕ್ಷತೆಯನ್ನು ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ವಹಿಸಿದ್ದರು ನಂತರ ಮಾತನಾಡಿದ ಅವರು, ಬಿಜೆಪಿ ಇಂದು ದೇಶದಲ್ಲಿ ಬೆಳೆಯಲು ಪಕ್ಷದ ಹಿರಿಯರು ಹಾಕಿದ ಅಡಿಪಾಯದಿಂದ ಸಾಧ್ಯವಾಗಿದ್ದು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ 61 ಸಾವಿರ ಮತಗಳು ಪಡೆಯಲು ಪಕ್ಷದ ಚಿಹ್ನೆಯಾದ ತಾವರೆ ಮತ್ತು ಪ್ರತೀ ಕಾರ್ಯಕರ್ತರ ಅವಿರತ ಶ್ರಮದಿಂದ ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಇನ್ನು ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಮಾತನಾಡಿ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಹಂತ ಹಂತವಾಗಿ ನಾವು ಬೆಳೆಯುತ್ತಿದ್ದೇವೆ. ಹಿಂದೆ ಉಳ್ಳಾಲ ಗ್ರಾಮಾಂತರದಲ್ಲಿ ೫೦೦ ಮತಗಳಿಂದ ಪ್ರಾರಂಭಗೊಂಡ ಮತಭೇಟೆ 60 ಸಾವಿರ ದಾಟುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಗೆಲುವು ನಮ್ಮದೇ ಎಂದರು.

 

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಜಿಲ್ಲಾ ಪ್ರ.ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply