Header Ads
Breaking News

ಬೋಳೂರು ಮೊಗವೀರ ಮಹಾಸಭಾದ ವತಿಯಿಂದ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ

ಮಂಗಳೂರಿನ ಬೋಳೂರು ಮೊಗವೀರ ಮಹಾಸಭಾ ರಿಜಿಸ್ಟರ್ ವತಿಯಿಂದ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ಬೋಳೂರು ಮೊಗವೀರ ಗ್ರಾಮ ಸಭಾಂಗಣದಲ್ಲಿ ನಡೆಯಿತು. ಇದೇ ವೇಳೆ ಸುಮಾರು ಐನೂರಕ್ಕೂ ಅಧಿಕ ಬಡ ಮೀನುಗಾರರ ಕುಟುಂಬಕ್ಕೆ ಉಚಿತ ಅಕ್ಕಿ ವಿತರಿಸಲಾಯಿತು.

ಮಂಗಳೂರಿನ ಮೊಗವೀರ ಗ್ರಾಮ ಸಭಾಂಗಣದಲ್ಲಿ ಬೋಳೂರು ಮೊಗವೀರ ಮಹಾಸಭಾ ರಿಜಿಸ್ಟರ್ ವತಿಯಿಂದ ಸಂಕಷ್ಟದಲ್ಲಿರುವ ಮೀನುಗಾರ ಕುಟುಂಬಕ್ಕೆ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ನಡೆಯಿತು. ಇನ್ನು ಸಭಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ವೇದವ್ಯಾಸ್ ಕಾಮತ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಇಡೀ ದೇಶದ ಜನತೆಗೆ ತಾವು ಕಷ್ಟ ಪಡುವ ಮುಖಾಂತರ ಎಲ್ಲರನ್ನು ಹೊಟ್ಟೆ ತುಂಬಿಸುವ ಕಾರ್ಯವನ್ನು ಮೊಗವೀರ ಸಮಾಜದವರು ಮಾಡ್ತಾ ಇದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ರು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಅವರು ಪಾಲ್ಗೊಂಡು ಮಾತನಾಡಿದರು, ಈ ಕಾರ್ಯಕ್ರಮ ಕೇವಲ ಅಕ್ಕಿ ವಿತರಣ ಮಾಡುವ ಕಾರ್ಯಕ್ರಮ ಮಾತ್ರವಲ್ಲ ಬದಲಾಗಿ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವಂತಹ ಕಾರ್ಯಕ್ರಮವೂ ಆಗಿದೆ ಎಂದು ಕಾರ್ಯಕ್ರಮದ ಬಗ್ಗೆ ಮಾಹಿತಿ ನಿಡಿದ್ರು.
ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ವಿ೪ ನ್ಯೂಸ್‌ನ ಆಡಳಿತ ನಿರ್ದೇಶಕರಾದ ಲಕ್ಷ್ಮಣ್ ಕುಂದರ್ ಹಾಗೂ ನಮ್ಮ ಕುಡ್ಲ ವಾಹಿನಿ ಮ್ಯಾನೇಜಿಂಗ್ ಡೈರೆಕ್ಟರ್ ಲೀಲಾಕ್ಷ ಕರ್ಕೇರರವರಿಗೆ ಗಣ್ಯರು ವೇದಿಕೆಯಲ್ಲಿ ಸನ್ಮಾನಿಸಿದ್ರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನ ಜಸ್ಟೀಸ್ ಫಾರಂನ ಅಧ್ಯಕ್ಷರಾದ ದಯಾನಂದ ಕೋಟ್ಯಾನ್ ವಹಿಸಿದ್ರು. ಈ ಸಂದರ್ಭ ದ.ಕ ಮೊಗವೀರ ಮಹಾಜನ ಸಂಘದ ನಿಕಟಪೂರ್ವ ಅಧ್ಯಕ್ಷ ಗಂಗಾಧರ ಕರ್ಕೇರ ಹೊಸಬೆಟ್ಟು, ದ.ಕ ಮೊಗವೀರ ಮಹಾಜನ ಮಹಿಳಾ ಸಂಘದ ಅಧ್ಯಕ್ಷೆ ಸರಳಾ ಕಾಂಚನ್, ಮತ್ಸ್ಯೋದ್ಯಮಿ ಭರತ್ ಭೂಷಣ್, ಬರ್ಕೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಉಮೇಶ್ ಉಪ್ಪಳಿಗೆ, ಬೋಳೂರು ಮೊಗವೀರ ಮಹಾಸಭಾ ಅಧ್ಯಕ್ಷರಾದ ರಾಜಶೇಖರ ಕರ್ಕೇರ, ಬೋಳೂರು ಮೊಗವೀರ ಮಹಿಳಾ ಸಭಾ ಅಧ್ಯಕ್ಷೆ ಸವಿತಾ ರಘು ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *