Header Ads
Header Ads
Header Ads
Breaking News

ಬ್ಯಾಂಕ್ ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ :ಮಂಗಳೂರಿನ ಪರೀಕ್ಷಾ ಕೇಂದ್ರಕ್ಕೆ ಕರವೇ ಮುತ್ತಿಗೆ

ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್‌ನಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಂಗಳೂರಿನ ಪರೀಕ್ಷಾ ಕೇಂದ್ರಕ್ಕೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದರು.


ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ರು. ಇದೇ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಬಿಗಿ ಪೊಲೀಸ್ ಬಂದು ಬಸ್ತ್‌ನಲ್ಲಿ ಇದ್ದ ಕಾವೂರು ಠಾಣೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು
ಇದೇ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅನಿಲ್ ದಾಸ್ ಮಾತನಾಡಿ, ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಹೊರ ರಾಜ್ಯದವರಿಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಉದ್ಯೋಗ ನೀಡಬಾರದೆಂದು ಆಗ್ರಹಿಸಿದರು.ಇನ್ನು ಅನೇಕ ಕಾರ್ಯಕರ್ತರು ಬಂಧನಕ್ಕೊಳಗಾಗಿ, ತದ ಬಳಿಕ ಬಿಡುಗಡೆಗೊಳಿಸಲಾಯಿತು.
ವರದಿ: ನಾಗೇಶ್ ಕಾವೂರು

Related posts

Leave a Reply