Header Ads
Breaking News

ಫಾದರ್ ಮುಲ್ಲರ್ ಡೆಸಿನಿಯಲ್ ಮೆಮೊರಿಯಲ್ ಹಾಲ್‌ನಲ್ಲಿ ಬ್ಯಾಚುಲರ್ ಇನ್ ಆಡಿಯೋಲಾಜಿ ಆಂಡ್ ಸ್ಪೀಚ್ ಲ್ಯಾಂಗ್ವೇಜ್ ಪೆಥಾಲಜಿ ಕೋರ್ಸ್ ನ ಉದ್ಘಾಟನೆ

 ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜು ಆಫ್ ಸ್ಪೀಚ್ ಆಂಡ್ ಹಿಯರಿಂಗ್‌ನ ಬ್ಯಾಚುಲರ್ ಇನ್ ಆಡಿಯೋಲಾಜಿ ಆಂಡ್ ಸ್ಪೀಚ್ ಲ್ಯಾಂಗ್ವೇಜ್ ಪೆಥಾಲಜಿ ಕೋರ್ಸ್ ಉದ್ಘಾಟನಾ ಸಮಾರಂಭ ಫಾದರ್ ಮುಲ್ಲರ್ ಡೆಸಿನಿಯಲ್ ಮೆಮೊರಿಯಲ್ ಹಾಲ್‌ನಲ್ಲಿ ನಡೆಯಿತು. 

 ಮಂಗಳೂರಿನ ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ಫಾದರ್ ಮುಲ್ಲರ್ ಕಾಲೇಜು ಆಫ್ ಸ್ಪೀಚ್ ಆಂಡ್ ಹಿಯರಿಂಗ್‌ನ 2019-20ನೇ ಸಾಲಿನ ಬ್ಯಾಚುಲರ್ ಇನ್ ಆಡಿಯೋಲಾಜಿ ಆಂಡ್ ಸ್ಪೀಚ್ ಲ್ಯಾಂಗ್ವೇಜ್ ಪೆಥಾಲಜಿಯ ಕೋರ್ಸ್ ಉದ್ಘಾಟನೆಗೊಂಡಿತು. ಫಾದರ್ ಮುಲ್ಲರ್ ಡೆಸಿನಿಯಲ್ ಮೆಮೊರಿಯಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಮಂಗಳೂರು ಎ.ಜೆ ಇನ್ಸಿಟ್ಯೂಟ್ ಆಫ್ ರಿಸರ್ಚ್ ಆಂಡ್ ಮೆಡಿಕಲ್ ಸೈನ್ಸ್‌ನ ಅಸೋಸಿಯೇಟ್ ಡೀನ್ ಮತ್ತು ಪ್ರೋಪೆಸರ್, ಫೊರೆನ್ಸಿಕ್ ಮೆಡಿಸಿನ್ ವಿಭಾಗದ ಎಚ್‌ಒಡಿ ಡಾ|ಫ್ರಾನ್ಸಿಸ್ ಎನ್.ಪಿ. ಮೊಂತೆರೋ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಲ್ಲಿ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇಂತಹ ಶಿಕ್ಷಣ ಸಂಸ್ಥೆಗಳನ್ನು ಆಯ್ಕೆಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಉತ್ತಮವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ನಿರ್ದೇಶಕ ರೆ.ಫಾದರ್ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಅಧ್ಯಕ್ಷತೆಯನ್ನ ವಹಿಸಿ ಮಾತನಾಡಿದರು, ಫಾದರ್ ಮುಲ್ಲರ್ ಸಂಸ್ಥೆಗಳು ಎಲ್ಲಾ ರೀತಿ ಸೌಲಭ್ಯವನ್ನು ಹೊಂದಿರುವ ಶಿಕ್ಷಣ ಸಂಸ್ಥೆಗಳಾಗಿವೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಾಮಾಜಿಕ ದುಶ್ಚಟಗಳಿಂದ ದೂರ ಇದ್ದು, ಕಲಿಕೆಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಫಾದರ್ ಮುಲ್ಲರ್‌ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರೇ.ಫಾದರ್ ಅಜಿತ್ ಮೆನೇಝಸ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾದರ್ ರುಡಾಲ್ಫ್ ರವಿ ಡೇಸಾ, ಫಾದರ್ ಮುಲ್ಲರ್ ಕಾಲೇಜು ಆಫ್ ಸ್ಪೀಚ್ ಆಂಡ್ ಹಿಯರಿಂಗ್‌ನ ಪ್ರಾಂಶುಪಾಲರಾದ ಪ್ರೋ.ಅಖಿಲೇಶ್ ಪಿ.ಎಂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *