Header Ads
Breaking News

ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ ಪ್ರಶಸ್ತಿ, ಪುರಸ್ಕಾರ ಪ್ರದಾನ : ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಅಭಿನಂದನಾ ಸಮಾರಂಭ

ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ ಪ್ರಶಸ್ತಿ, ಪುರಸ್ಕಾರ ಪ್ರದಾನ ಮತ್ತು ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಅಭಿನಂದನಾ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿತು.

ಸಮಾರಂಭವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಅಧ್ಯಕ್ಷ ಸಿ.ಟಿ.ರವಿ ಉದ್ಘಾಟಿಸಿದರು. ನಂತರ ಶುಭಹಾರೈಸಿದರು.ಈ ಸಂದರ್ಭದಲ್ಲಿ 2018, 2019, 2020 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಗೌರವ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಬ್ಯಾರಿ ಲಿಪಿ ಸಂಶೋಧನಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಿದ್ದರು.ನಂತರ ಮಾತನಾಡಿದರು.ಮುಖ್ಯ ಅತಿಥಿಯಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಭರಣ, ಮಂಗಳೂರು ಶಾಸಕ ಯುಟಿ ಖಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಎಸ್.ರಂಗಪ್ಪ, ಯುವಜಾಗೃತಿ ಬಳಗದ ಅಧ್ಯಕ್ಷೆ ಮತ್ತು ನಟಿ ಪ್ರಾಚೀಗೌಡ ಭಾಗವಹಿಸಿದ್ದರು. ಅಕಾಡೆಮಿ ಸದಸ್ಯರಾದ ನಝೀರ್ ಪೊಲ್ಯ,  ಸುರೇಖಾ, ರೂಪಶ್ರೀ ವರ್ಕಾಡಿ,ರಿಜಿಸ್ಟ್ರಾರ್ ಪೂರ್ಣಿಮಾ, ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ,ಮಾಜಿ ಸದಸ್ಯ ಹುಸೇನ್ ಕಾಟಿಪಳ್ಳ ಉಪಸ್ಥಿತರಿದ್ದರು. ಬ್ಯಾರಿ ಸಂಗೀತ, ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

Leave a Reply

Your email address will not be published. Required fields are marked *